CHITRADURGA NEWS | 02 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ 5 ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು(POLICE) ಹಾಗೂ ಇಲಾಖೆಯಲ್ಲಿರುವ ಎಲ್ಲಾ ಅಂಗ ರಕ್ಷಕರನ್ನು ಸರ್ಕಾರದ ಆದೇಶದಂತೆ ವರ್ಗಾವಣೆಗೊಳಿಸಬೇಕೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: Competition: ಪ್ರತಿಭಾ ಕಾರಂಜಿ ಸ್ಪರ್ಧೆ | ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸಾಧನೆ
ಒಂದೇ ಠಾಣೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಇರುವ ಪೊಲೀಸರನ್ನು ವರ್ಗಾವಣೆ ಮಾಡುವಂತೆ ಗೃಹ ಇಲಾಖೆಯು ಆದೇಶಿಸಿದ್ದು, ಜಿಲ್ಲೆಯಲ್ಲಿ ಕೆಲವೇ ಪೊಲೀಸರನ್ನು ವರ್ಗಾವಣೆ ಮಾಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ವರ್ಗಾವಣೆ ವಿಚಾರ ಬಂದಾಗ ನಿಯಮಾವಳಿ ಪ್ರಕಾರ ವರ್ಗಾವಣೆಯಾಗಬೇಕು. ಜಿಲ್ಲೆಯ ಕೆಲವು ಠಾಣೆಗಳಲ್ಲಿ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿರುವವರನ್ನು ಕೂಡಲೇ ಬೇರೆ ಕಡೆ ವರ್ಗಾವಣೆಗೊಳಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮನವಿ ಮಾಡಿದರು.
ಕ್ಲಿಕ್ ಮಾಡಿ ಓದಿ: BEST FORMER: ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಈ ವೇಳೆ ವೀಣಗೌರಣ್ಣ, ಗೋಪಿನಾಥ್, ಅಣ್ಣಪ್ಪ, ಸಿ.ಜಗದೀಶ್, ಮುಜಾಹಿದ್, ಪಿ.ಅವಿನಾಶ್, ಪಾಂಡು, ನಾಗರಾಜ್ ಮುತ್ತು, ಮಧುಸೂಧನ್, ಸುರೇಶ್ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number