CHITRADURGA NEWS | 06 JUNE 2026
ಚಿತ್ರದುರ್ಗ: ರಾಜ್ಯ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ನೀಡಬೇಕು. ಮಾಜಿ ಸಚಿವರಾದ ಜಮೀರ್ ಅಹಮ್ಮದ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮುಸ್ಲೀಂ ಮುಖಂಡರು ಪ್ರತಿಭಟಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 6 ಜೂನ್ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್
ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ಹಲವು ಮುಸ್ಲೀಂ ಮುಖಂಡರು, ಕರ್ನಾಟಕದಲ್ಲಿ ಕಾಂಗ್ರೆಸ್ ಎಲ್ಲಾ ವರ್ಗ, ಸಮುದಾಯಗಳ ಆಶೋತ್ತರಗಳನ್ನು ಪ್ರತಿನಿಧಿಸುವ ಪಕ್ಷವಾಗಿದೆ.
ರಾಜ್ಯದ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅಲ್ಪಸಂಖ್ಯಾತ ಸಮುದಾಯದ ಕೊಡುಗೆ ಮಹತ್ತರವಾಗಿದೆ. ಆದ್ದರಿಂದ ರಾಜ್ಯದ ನೂತನ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೆ ಸಮರ್ಪಕ ಮತ್ತು ನ್ಯಾಯಯುತ ಪ್ರಾತಿನಿಧ್ಯ ದೊರೆಯಬೇಕೆಂದು ನಾವು ಒತ್ತಾಯಿಸಿದರು.
ವಿಶೇಷವಾಗಿ, ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ನೀಡುವ ಮೂಲಕ ಸರ್ಕಾರವು ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶದ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದರು.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ
ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮೌಲ್ಯಗಳು ಹಾಗೂ ಚುನಾವಣಾ ಗೆಲುವುಗಳಲ್ಲಿ ನಿರಂತರವಾಗಿ ಮಹತ್ವದ ಪಾತ್ರವನ್ನು ವಹಿಸಿದೆ. ಹೀಗಾಗಿ ಸಚಿವ ಸಂಪುಟದಲ್ಲಿ ಅವರ ಜನಸಂಖ್ಯೆ, ರಾಜಕೀಯ ಕೊಡುಗೆ ಹಾಗೂ ಸಾಮಾಜಿಕ ಪ್ರಾತಿನಿಧ್ಯವನ್ನು ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಲ್ಪಸಂಖ್ಯಾತ ಸಮುದಾಯದ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲಿದ್ದಾರೆ ಎಂಬ ವಿಶ್ವಾಸ ನಮ್ಮದಾಗಿದೆ.
ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸರ್ವ ಸಮುದಾಯಗಳ ಅಭಿವೃದ್ಧಿಯೇ ಕಾಂಗ್ರೆಸ್ ಪಕ್ಷದ ಧ್ಯೇಯವಾಗಿದ್ದು, ಈ ತತ್ವದ ಆಧಾರದ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ನಾವು ಆಗ್ರಹಿಸುತ್ತೇವೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಆಡಿಯೋ ಸಂಪೂರ್ಣ ಸುಳ್ಳು ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ(DCM) ಸ್ಥಾನ ತಪ್ಪಿಸಲು ಕುತಂತ್ರ ಆಡಿಯೋ ಮೊದಲು ಯಾಕೆ ಬಿಡಲಿಲ್ಲ ಈ ಸಂದರ್ಭದಲ್ಲಿ ಯಾಕೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
ಈ ಆಡಿಯೋ ಸಂಪೂರ್ಣ ಸುಳ್ಳು ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಆಡಿಯೋ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಇವರಿಗೆ ಮಂತ್ರಿ ಸ್ಥಾನ ಜೊತೆಗೆ ಡಿಸಿಎಂ ಮಾಡೇ ಮಾಡುತ್ತಾರೆಂದು ನಂಬಿಕೆ ಇದೆ ಎಂದು ನೂರಾರು ಸಂಖ್ಯೆಯಲ್ಲಿ ಮುಸ್ಲೀಂ ಸಮುದಾಯದವರು ಪ್ರತಿಭಟಿಸಿದರು.
ರಾಜ್ಯ ವಕ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಭಾಷಾ, ಮುಸ್ಲಿಂ ಹಾಸ್ಟೆಲ್ ಅಧ್ಯಕ್ಷಋಾದ ಹಾಜಿ ನಯಾಜ್, ಕಾಂಗ್ರೆಸ್ ಮುಖಂಡರಾದ ಸಯ್ಯದ್ ಅನಿಸ್, ನಗರಸಭೆ ಸದಸ್ಯ ಸರ್ದಾರ್ ಅಹಮದ್ ಪಾಷಾ, ಹಿರಿಯ ವಕೀಲ ಸಾಧಿಕ್‌ಉಲ್ಲಾ, ದಲಿತ ಮುಖಂಡರಾದ ಬಾಳೆಕಾಯಿ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ಖುದ್ದೂಸ್, ಮುತ್ವಲ್ಲಿ ದಾದಾಪೀರ್, ಸ್ಲಂ ಬೋರ್ಡ್ ಸದಸ್ಯ ರಶೀದ್, ಅನ್ವರ್ ವರ್ದ, ನಗರಸಭೆ ಸದಸ್ಯರಾದ ದಾವೂದ್, ಗೊಪ್ಪೆ ಮಂಜುನಾಥ್, ಇರ್ಫಾನ್, ಈಜಾಜ್, ನಿಜಾಂ, ಯೂಸುಫ್, ಅಕ್ರಂ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
