CHITRADURGA NEWS | 27 MAY 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಅಭಿವೃದ್ದಿಗೆ ಪಣತೊಟ್ಟು ನಿಂತಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿರವರಿಗೆ ಮಂತ್ರಿ ಸ್ಥಾನ ನೀಡುವಂತೆ ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಂ.ಮಂಜುನಾಥ್ ಕಾಂಗ್ರೆಸ್ ವರಿಷ್ಟರನ್ನು ಒತ್ತಾಯಿಸಿದರು.
ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಜನ್ಮ ದಿನಾಚರಣೆ
ಪತ್ರಕರ್ತರ ಭವನದಲ್ಲಿ ಬುಧವಾರ ಕೆ.ಸಿ.ವೀರೇಂದ್ರಪಪ್ಪಿರವರ ಅಭಿಮಾನಿಗಳ ಬಳಗದಿಂದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಟು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಹಾಕಿಕೊಂಡಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿರವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಶರವೇಗದಲ್ಲಿ ಅಭಿವೃದ್ದಿಯಾಗಲಿದೆ.
ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಶಾಸಕರಿಗೆ ಆದ್ಯತೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡನ್ನು ಆಗ್ರಹಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಹಾಗೂ ಭದ್ರಾಮೇಲ್ದಂಡೆ ಯೋಜನೆಗಾಗಿ ಸಾಕಷ್ಟು ಹೋರಾಟ ಮಾಡಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿರವರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಲೇಬೇಕು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಹೊರಟಿರುವ ಇವರಿಗೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಯುವಕರ ಕಣ್ಮಣಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ನೀಡಬೇಕು. ಎಂಟು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ರಸ್ತೆ ಅಗಲೀಕರಣದ ಕನಸು ಹೊತ್ತಿರುವ ಇವರಿಗೆ ಸಚಿವ ಸ್ಥಾನ ಕೊಡಬೇಕೆಂಬುದು ನಮ್ಮ ಆಗ್ರಹ ಎಂದು ಭೀಮಸಮುದ್ರದ ಉದ್ಯಮಿ ಸಿರಾಜ್ ಕಾಂಗ್ರೆಸ್ ನಾಯಕರುಗಳಲ್ಲಿ ವಿನಂತಿಸಿದರು.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಕೊರತೆಯನ್ನು ನೀಗಿಸಿರುವ ಶಾಸಕ ಕೆ.ಸಿ.ವೀರೇಂದ್ರಪಪ್ಪಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕೆಂದು ಕಾಂಗ್ರೆಸ್ ಮುಖಂಡರುಗಳಲ್ಲಿ ಕೋರಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ದೇವರಾಜ್ ಲಕ್ಷ್ಮಿಸಾಗರ, ರವಿಶಂಕರ್ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
