
CHITRADURGA NEWS | 31 MAY 2026
ಚಿತ್ರದುರ್ಗ: ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ
ಚಾಮರಾಜನಗರದಿಂದ 4ನೇ ಬಾರಿಗೆ ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮಾಜದಿಂದ ಏಕೈಕ ಶಾಸಕರಾಗಿದ್ದು, ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡುವ ಮೂಲಕ ನಮ್ಮ ಜನಾಂಗಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್‍ರವರಲ್ಲಿ ಮನವಿ ಮಾಡಿರುವ ಆರ್.ಮೂರ್ತಿ ಹಿಂದಿನಿಂದಲೂ ನಮ್ಮ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿದೆ.
ರಾಜ್ಯದಲ್ಲಿ 45 ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಉಪ್ಪಾರ ಸಮಾಜ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಮತ ನೀಡಬೇಕಾದರೆ ಸಿ.ಪುಟ್ಟರಂಗಶೆಟ್ಟಿರವರಿಗೆ ಸಚಿವ ಸ್ಥಾನ ಸಿಗಲೇಬೇಕೆಂದು ಆಗ್ರಹಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
