CHITRADURGA NEWS | 25 MARCH 2026
ಚಿತ್ರದುರ್ಗ: ಉದ್ಯೋಗ ನೇಮಕದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್.ಮೂರ್ತಿ ಸ್ಥಾಪಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಕಾಂತರಾಜ್ ಅವರ ಮೂಲಕ ರಾಷ್ಟ್ರಪತಿ, ಪ್ರಧಾನ ಮಂತ್ರಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಇವರುಗಳಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒಳ ಮೀಸಲಾತಿ ಜಾರಿಗೊಳಿಸದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಒಳ ಮೀಸಲಾತಿ ಅನ್ವಯಿಸದೆ ರಾಜ್ಯ ಸರ್ಕಾರ 56,432 ಹುದ್ದೆಗಳ ನೇಮಕಾತಿಗೆ ಸುತ್ತೋಲೆ ಹೊರಡಿಸಿರುವುದನ್ನು ಕೂಡಲೆ ಹಿಂದಕ್ಕೆ ಪಡೆದು ಶೇ.15 ರಷ್ಟು ಮೀಸಲಾತಿಯನ್ವಯ ನೇಮಕಾತಿ ಮಾಡಿಕೊಳ್ಳಬೇಕು. ವಿಶ್ವವಿದ್ಯಾಲಯಗಳನ್ನು ಒಂದು ಘಟಕವನ್ನಾಗಿಸಿ ಉದ್ಯೋಗ ನೇಮಕಾತಿಯನ್ನು ಕೈಬಿಡಬೇಕು.
ಅಲೆಮಾರಿ, ಅರೆಅಲೆಮಾರಿಗಳಿಗೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿಗೆ ಶೇ.17, ಪರಿಶಿಷ್ಟ ವರ್ಗಕ್ಕೆ ಶೇ.7 ರಷ್ಟು ಒಟ್ಟು ಶೇ.56 ರಷ್ಟು ಮೀಸಲಾತಿಯನ್ನು ಸಂವಿಧಾನದ 9 ನೇ ಅನುಸೂಚಿಸಯಲ್ಲಿ ಸೇರಿಸಿ ಮೀಸಲಾತಿ ಹೆಚ್ಚಿಸಬೇಕು. ಉದ್ಯೋಗ ನೇಮಕಾತಿ, ನೇರ ನೇಮಕಾತಿ, ಬ್ಯಾಕ್‍ಲಾಗ್, ಬಡ್ತಿ, ಮುಂಬಡ್ತಿ, ಒಳಗುತ್ತಿಗೆ, ಎಸ್ಸಿಪಿ, ಟಿಎಸ್ಪಿ, ಆರ್ಥಿಕ ಸೌಲಭ್ಯ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಒಳ ಮೀಸಲಾತಿ ಕಲ್ಪಿಸಬೇಕೆಂದು ಸರ್ಕಾರವನ್ನು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ: ಕ್ಷಯ ರೋಗಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಗುಣಮುಖ
ಒಳ ಮೀಸಲಾತಿ ಅನುಷ್ಟಾನಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್, ಆ.1, 2024 ರಂದು ಮಹತ್ವದ ತೀರ್ಪು ನೀಡಿದ್ದರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಇಚ್ಚಾಶಕ್ತಿ ತೋರುತ್ತಿಲ್ಲ. ಕಳೆದ 35 ವರ್ಷಗಳಿಂದಲೂ ಒಳ ಮೀಸಲಾತಿ ಜಾರಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಈಗಲಾದರು ಎಚ್ಚೆತ್ತುಕೊಂಡು ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ, ದಲಿತ ಮುಖಂಡ ಬಿ.ರಾಜಪ್ಪ, ಭ್ರಷ್ಠಾಚಾರ ನಿರ್ಮೂಲನಾ ವೇದಿಕೆ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ, ಗುರುಮೂರ್ತಿ ಜಿ, ಹೆಚ್.ಶಿವಮೂರ್ತಿ ಬಹದ್ದೂರ್‍ಘಟ್ಟ, ಎಂ.ದೇವರಾಜ್ ಲಕ್ಷ್ಮಿಸಾಗರ, ಕರ್ನಾಟಕ ರೈತ ಕಾರ್ಮಿಕ ಯುವ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಹೆಚ್.ಶಶಿಧರ್, ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಜಿಲ್ಲಾಧ್ಯಕ್ಷ ಜಿ.ಎಂ.ಪ್ರಕಾಶ್, ಮಹಾನಾಯಕ ದಲಿತ ಸೇನೆ ರಾಜ್ಯಾಧ್ಯಕ್ಷ ತಾಳಿಕೆರೆ ಎ.ಮಂಜುನಾಥ್, ಕೆ.ರಾಜಣ್ಣ, ಮಲ್ಲಿಕಾರ್ಜುನ್ ಪಾರ್ಥ, ಕೆ.ಅವಿನಾಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಭೀಮರಾಜ್ ಹಳವುದರ, ಪಾಪಲಿಂಗೇಶ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
