Connect with us

FARMERS; ರೈತರಿಗೆ ಹೊರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಗ್ರಹ | ಆರ್.ಆರ್ ಸಂಖ್ಯೆಗೆ ಆಧಾರ್ ಜೋಡಣೆಗೆ ವಿರೋಧ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು

ಮುಖ್ಯ ಸುದ್ದಿ

FARMERS; ರೈತರಿಗೆ ಹೊರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಗ್ರಹ | ಆರ್.ಆರ್ ಸಂಖ್ಯೆಗೆ ಆಧಾರ್ ಜೋಡಣೆಗೆ ವಿರೋಧ

CHITRADURGA NEWS | 18 JULY 2024

ಚಿತ್ರದುರ್ಗ: ರೈತರಿಗೆ ಹೊರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಹಾಗೂ ಸರ್ಕಾರ ತಂದಿರುವ ಆರ್.ಆರ್ ಸಂಖ್ಯೆಗೆ ಆಧಾರ್ ಜೋಡಣೆಗೆಯನ್ನು ವಿರೋಧಿಸಿ ರೈತರು( FARMERS) ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: SALUMARADA THIMMAKKA; ಇಮ್ಮಡಿ‌ ಸಿದ್ಧರಾಮೇಶ್ವರ ಸ್ವಾಮೀಜಿ ರಜತ‌ ಮಹೋತ್ಸವ | ಸಸಿ ನೆಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವಂತೆ ಮನವಿ ಮಾಡಿದರು.

ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಂತ ವೆಚ್ಚ ಭರಿಸುವಂತೆ ಸರ್ಕಾರ ತೀರ್ಮಾನಿಸಿರುವುದು ರೈತರಿಗೆ ಹೊರೆಯಾಗುತ್ತದೆ. 2 ರಿಂದ 3 ಲಕ್ಷ ರೂ.ವೆಚ್ಚ ಭರಿಸುವುದು ರೈತರಿಂದ ಅಸಾಧ್ಯ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಹಳೆ ಪದ್ದತಿಯನ್ನು ಮುಂದುವರೆಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

ಇದನ್ನೂ ಓದಿ: AdikeRate; ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಆಧಾರ್ ಲಿಂಕ್ ಮಾಡುವ ಉದ್ದೇಶವೇನು ಎನ್ನುವುದನ್ನು ಸರ್ಕಾರ ತಿಳಿಸಬೇಕು. ಭೂ ಸುಧಾರಣಾ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ಕೂಡಲೆ ಹಿಂದಕ್ಕೆ ಪಡೆಯಬೇಕು. ರೈತರು ಜಮೀನುಗಳಿಗೆ ಓಡಾಡಲು ನಕಾಶೆಯಿಲ್ಲದಿರುವುದು ಅನೇಕ ಹಳ್ಳಿಗಳಲ್ಲಿ ಜಮೀನಿಗೆ ಹೋಗಲು ತೊಂದರೆಯಾಗುತ್ತಿದೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್‍ಗೆ ಸೂಚನೆ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದರು.

ಕಳೆದ ವರ್ಷ ಏಪ್ರಿಲ್‍ನಿಂದ ಇದುವರೆವಿಗೂ 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸರ್ಕಾರ ರೈತ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಬೇಕು.

ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ರಾಜ್ಯ ಸರ್ಕಾರವೇ ಎಂ.ಎಸ್.ಪಿ. ನಿಗದಿಪಡಿಸಿ ಖರೀದಿಸಬೇಕು.

ಬರಗಾಲವನ್ನು ಎದುರಿಸುತ್ತಿರುವ ರೈತರು ಸಾಲ ಬಾಕಿ ಪಾವತಿಸುವಂತೆ ಬ್ಯಾಂಕ್‍ಗಳು ಕಿರುಕುಳ ನೀಡುತ್ತಿರುವುದು ನಿಲ್ಲಬೇಕು. ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಿ ವಿಮಾ ಕಂಪನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆಗಳಿಗೆ ತಕ್ಷಣವೇ ಜಮಾ ಮಾಡಬೇಕು ರೈತರು ಆಗ್ರಹಿಸಿದರು.

ಇದನ್ನೂ ಓದಿ: ಬೇಲಿ ಮೇಲಿನ ಹಣ್ಣು ತಿಂದು ಮಕ್ಕಳು ಅಸ್ವಸ್ಥ | ಆಸ್ಪತ್ರೆಗೆ ದಾಖಲು

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಕಾರ್ಯಾಧ್ಯಕ್ಷ ಹೊರಕೇರಪ್ಪ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ತಾಲ್ಲೂಕು ಅಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ನಾಗರಾಜ್ ಮುದ್ದಾಪುರ, ಎ.ತಿಪ್ಪೇಸ್ವಾಮಿ, ಚೇತನ ಯಳನಾಡು, ಕರಿಬಸವಣ್ಣ, ಕುಮಾರಸ್ವಾಮಿ, ಕೋಗುಂಡೆ ರವಿ, ಏಕಾಂತಪ್ಪ, ಪ್ರಭು, ಬಿ.ಓ.ಶಿವಕುಮಾರ್, ವಿ.ನಾಗೇಂದ್ರಪ್ಪ, ಸರ್ವೋದಯ ಕರ್ನಾಟಕ ಪಾರ್ಟಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಸೇರಿದಂತೆ ರೈತರು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version