
CHITRADURGA NEWS | 23 AUGUST 2025
ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ನಗರ ಸೇರಿ ಹಲವೆಡೆ ಎರಡು ದಿನ ವಿದ್ಯುತ್ ವ್ಯತ್ಯಯ
12 ತರಗತಿ ಉತ್ತೀರ್ಣರಾದವರಿಗೆ ಸ್ವಾಗತಗಾರರು, 10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಿಕೆ ಹಾಗೂ 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ ತರಬೇತಿ ನೀಡಲಾಗುವದು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್‍ಎ (ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮತ್ತು ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್) ಮೂಲಕ ಬೆಂಗಳೂರು ಹಾಗೂ ಮೈಸೂರಿನಲ್ಲಿ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿಯು ಸೆಪ್ಟೆಂಬರ್ 01 ರಂದು ಪ್ರಾರಂಭವಾಗುತ್ತಿರುವುದರಿಂದ ಅರ್ಜಿಯನ್ನು ಆಗಸ್ಟ್ 22 ರಿಂದ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ರವರ ಕಚೇರಿಯಿಂದ ಅರ್ಜಿಗಳನ್ನು ವಿತರಿಸಲಾಗುವುದು. ಸೇವಾ ಸಿಂಧೂ ವೆಬ್‍ಸೈಟ್ sevasindhu.karnataka.gov.in ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಒಳಮೀಸಲಾತಿ ವಿಚಾರ | ಮಾದಾರ ಚನ್ನಯ್ಯ ಶ್ರೀ ಮಹತ್ವದ ಸುದ್ದಿಗೋಷ್ಠಿ
ತರಬೇತಿ ಪಡೆಯಲು ಆಸಕ್ತ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಗೆ ಸಲ್ಲಿಸಿ, ಮೂಲ ದಾಖಲೆಗಳನ್ನು ಕಚೇರಿಯ ಸಮಯದಲ್ಲಿ (ರಜೆ ದಿನಗಳನ್ನು) ಹೊರತುಪಡಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08194-234466 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
