CHITRADURGA NEWS | 20 SEPTEMBER 2024
ಚಿತ್ರದುರ್ಗ: ಪೊಲೀಸ್ ಇಲಾಖೆ ವತಿಯಿಂದ 8ನೇ ತಂಡದ ನಾಗರೀಕ, 3ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಮತ್ತು 1ನೇ ತಂಡದ ಜೈಲ್ ವಾರ್ಡರ್‍ಗಳ ನಿರ್ಗಮನ ಪಥ ಸಂಚಲನ(Departure Sect Movement) ಸೆ. 23 ರಂದು ಐಮಂಗಲದ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Cotpa act: ನಿಯಮ ಉಲ್ಲಂಘಿಸುವ ಅಂಗಡಿಗಳ ಪರವಾನಿಗೆ ರದ್ದು ಮಾಡಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ದಾವಣಗೆರೆ ಪೂರ್ವ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಬಿ. ರಮೇಶ್ ಅವರಿಂದ ಪಥಸಂಚಲನ ಪರಿವೀಕ್ಷಣೆ ಮತ್ತು ಬಹುಮಾನ ವಿತರಣೆ ನಡೆಯಲಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಐಮಂಗಲದ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಪಿ. ಪಾಪಣ್ಣ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
