CHITRADURGA NEWS | 15 MAY 2026
ಚಿತ್ರದುರ್ಗ: ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
ಈ ವೇಳೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವೆ ಸಮನ್ವಯತೆಯಿರುವುದರಿಂದ ರಾಜ್ಯ ಸರ್ಕಾರ ಮೂರು ವರ್ಷಗಳ ಅಧಿಕಾರವಧಿಯನ್ನು ಯಶಸ್ವಿಯಾಗಿ ಪೂರೈಸಿದೆ.
ಏಪ್ರಿಲ್‍ನಲ್ಲಿ ನಡೆದ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದು ಪಂಚ ಗ್ಯಾರೆಂಟಿ ಯೋಜನೆಗಳು ಹಾಗೂ ಕಾರ್ಯಕರ್ತರ, ಮುಖಂಡರುಗಳ ಪರಿಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಜಕೀಯ ಜೀವನದಲ್ಲಿ ಡಿ.ಕೆ.ಶಿವಕುಮಾರ್‍ರವರಿಗೆ ಉನ್ನತ ಸ್ಥಾನಮಾನಗಳು ಸಿಗಲಿ ಎಂದು ಆಶಿಸಿದರು.
ಇದನ್ನೂ ಓದಿ: ಹೊಳಲ್ಕೆರೆ ಪುರಸಭೆಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಅಹ್ವಾನ
ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ಅಧ್ಯಕ್ಷ
ಎನ್.ಡಿ.ಕುಮಾರ್, ಪರಿಶಿಷ್ಟ ವರ್ಗಗಳ ಅಧ್ಯಕ್ಷ ಮಂಜುನಾಥ್, ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಅಬ್ದುಲ್ಲಾ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಅಧ್ಯಕ್ಷ ಟಿಪ್ಪುಖಾಸಿಂಆಲಿ, ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್‍ರವರ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಜೆ.ಮಂಜುನಾಥ, ಸೈಯದ್ ಸೈಫುಲ್ಲಾ, ಇಂದಿರಾ, ಜಿ.ವಿ.ಮಧುಗೌಡ ಗಂಜಿಗಟ್ಟೆ, ದಲಿತ ಮುಖಂಡ ಜಿ.ರಾಜಪ್ಪ, ಕಾಂಗ್ರೆಸ್ ಕಾರ್ಯದರ್ಶಿ ರಮೇಶ್, ನ್ಯಾಯವಾದಿ ಸುದರ್ಶನ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಎಸ್.ಎನ್.ಸುರೇಶ್, ಸೈಯದ್ ಅಫಾಖ್ ಅಹಮದ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
