
CHITRAUDRGA NEWS | 10 JULY 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ದೇವರಕೊಟ್ಟದ ಏಕಲವ್ಯ ಮಾದರಿ ವಸತಿ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಪರಿಶೀಲಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವ ಮೂಲಕ ಉತ್ತಮ ಫಲಿತಾಂಶ ದಾಖಲಿಸಲು ವಿಶೇಷ ಗಮನ ಹರಿಸಬೇಕು. ಶಾಲಾ ಆವರಣದಲ್ಲಿ ಸ್ವಚ್ಛತೆ ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗಸೂಚಿಗಳು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಶಾಲಾ ವಸತಿ ಗೃಹಗಳಲ್ಲಿಯೇ ವಾಸ್ತವ್ಯ ಹೂಡಬೇಕು. ಶಾಲೆಯ ಆವರಣದಲ್ಲಿ ಏನಾದರೂ ಸಣ್ಣಪುಟ್ಟ ದುರಸ್ತಿ ಕಾಮಗಾರಿಗಳಿದ್ದರೆ, ಗಮನಕ್ಕೆ ತಂದು ಪೂರ್ವಾನುಮತಿ ಪಡೆದು ತಕ್ಷಣವೇ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ಮೆನು ಚಾರ್ಟ್ ಪ್ರಕಾರವೇ ಗುಣಮಟ್ಟದ ಊಟ ಹಾಗೂ ತಿಂಡಿ ನೀಡಬೇಕು. ಕಡ್ಡಾಯವಾಗಿ ಶುದ್ಧೀಕರಿಸಿದ ಕುಡಿಯುವ ನೀರನ್ನೇ ಮಕ್ಕಳಿಗೆ ಪೂರೈಸಬೇಕು. ಎಲ್ಲ ವಿದ್ಯಾರ್ಥಿಗಳಿಗೂ ನಿಯಮಿತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು.
ಇದನ್ನೂ ಓದಿ: ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
ಮಕ್ಕಳ ಆರೋಗ್ಯದ ವೈಯಕ್ತಿಕ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆ ಇರುವ ಮಕ್ಕಳ ಮೇಲೆ ನಿರಂತರ ನಿಗಾ ವಹಿಸಬೇಕು ಮತ್ತು ಶಾಲಾ ನರ್ಸ್ ಈ ಬಗ್ಗೆ ನಿಯಮಿತವಾಗಿ ಫಾಲೋ-ಅಪ್ ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
ಪ್ರತಿ ತಿಂಗಳು ಪೋಷಕರು ಮತ್ತು ಶಿಕ್ಷಕರ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಶಾಲೆಯು ವಿಶಾಲವಾದ 36 ಎಕರೆ ಪ್ರದೇಶದಲ್ಲಿದ್ದು, ಆವರಣದಲ್ಲಿ ಬೆಳೆದಿರುವ ಅನಗತ್ಯ ಗಿಡಗಂಟಿಗಳು ಹಾಗೂ ಹುಲ್ಲನ್ನು ತಕ್ಷಣವೇ ತೆರವುಗೊಳಿಸಿ ಆಟದ ಮೈದಾನ ಹಾಗೂ ಶಾಲಾ ಆವರಣವನ್ನು ಸದಾ ಸುಸ್ಥಿತಿಯಲ್ಲಿಡಬೇಕು ಎಂದು ನಿರ್ದೇಶನ ನೀಡಿದರು.
ದೇವರಕೊಟ್ಟದ ಏಕಲವ್ಯ ಮಾದರಿ ವಸತಿ ಶಾಲೆಯು ಸಿಬಿಎಸ್‍ಇ ಪಠ್ಯಕ್ರಮ ಹೊಂದಿದ್ದು, 6 ನೇ ತರಗತಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಗುಣಮಟ್ಟದ ಶಿಕ್ಷಣದ ಹಿನ್ನೆಲೆಯಲ್ಲಿ ಈ ಶಾಲೆಗೆ ಭಾರಿ ಬೇಡಿಕೆಯಿದ್ದು, ಮೊದಲ ಸುತ್ತಿನಲ್ಲೇ 6 ನೇ ತರಗತಿಯ ಎಲ್ಲ ಸೀಟುಗಳು ಭರ್ತಿಯಾಗಿವೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿ | ಅರ್ಜಿ ಅಹ್ವಾನ
ಈ ಸಂದರ್ಭದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರಾದ ಧನರಾಮ್ ಚೌಧರಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಸೇರಿದಂತೆ ಮತ್ತಿತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

