By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
    ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
    13 minutes ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
    17 minutes ago
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
    18 minutes ago
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
    21 minutes ago
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    14 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 hour ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    3 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಜಾಮೀನು ಸಿಕ್ಕರೂ ಬಿಡುಗಡೆಯಾಗಲಿಲ್ಲ ಶರಣರು | ಕಾನೂನು ಸಮರದಲ್ಲಿ ನಾಳೆ ಏನಾಗಬಹುದು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಾಮೀನು ಸಿಕ್ಕರೂ ಬಿಡುಗಡೆಯಾಗಲಿಲ್ಲ ಶರಣರು | ಕಾನೂನು ಸಮರದಲ್ಲಿ ನಾಳೆ ಏನಾಗಬಹುದು

chitradurganews.com
Last updated: 15 November 2023 21:45
chitradurganews.com
3 years ago
Share
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
SHARE

ಚಿತ್ರದುರ್ಗ ನ್ಯೂಸ್.ಕಾಂ: ಹೈಕೋರ್ಟ್ ನೀಡಿದ ಜಾಮೀನು ಅರ್ಜಿಯ ಅನುಸಾರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಬುಧವಾರ ಜೈಲಿನಿಂದ ಬಿಡುಗಡೆಗೆ ಆದೇಶ ಮಾಡಿದರೂ, ಶರಣರು ಹೊರಗೆ ಬರಲು ಸಾಧ್ಯವಾಗಲಿಲ್ಲ.

ನ್ಯಾಯಾಲಯದ ಆದೇಶ ಪ್ರತಿ ಜಿಲ್ಲಾ ಕಾರಾಗೃಹಕ್ಕೆ ತಲುಪುವುದು ವಿಳಂಬವಾದ ಕಾರಣ ಬುಧವಾರ ಸಂಜೆ ಶ್ರೀಗಳು ಜೈಲಿನಿಂದ ಹೊರಗೆ ಬರಲು ಸಾಧ್ಯವಾಗಲಿಲ್ಲ.

ಈ ನಡುವೆ ಸರ್ಕಾರದ ಪರ ವಕೀಲರಾದ ಜಗದೀಶ್, ಎರಡನೇ ಪೋಕ್ಸೋ ಪ್ರಕರಣದಲ್ಲಿ ಶರಣರ ಬಾಡಿ ವಾರೆಂಟ್ ಅನ್ನು ನಾಳೆಯವರೆಗೆ ಮುಂದುವರೆಸಬೇಕು. ಆನಂತರ ಈ ಬಾಡಿ ವಾರೆಂಟನ್ನು ನ್ಯಾಯಾಂಗ ಬಂಧನವಾಗಿ ಪರಿವರ್ತನೆ ಮಾಡಬೇಕು ಎಂದು ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

chitradurga jail

ಒಂದು ಕಡೆ ಶರಣರ ಪರ ವಕೀಲರಾದ ಸಂದೀಪ್ ಪಾಟೀಲ್, ಎರಡನೇ ಪ್ರಕರಣದಲ್ಲಿ ತನಿಖೆ, ಚಾರ್ಜ್‍ಶೀಟ್ ಸಲ್ಲಿಕೆ ಎಲ್ಲವೂ ಮುಗಿದಿರುವುದರಿಂದ ಈ ಪ್ರಕರಣದಲ್ಲಿ ಶರಣರನ್ನು ಜೈಲಿನಲ್ಲಿಟ್ಟುಕೊಳ್ಳಲು ಅವಕಾಶವಿಲ್ಲ ಎಂದು ವಾದಿಸುತ್ತಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರಿಗೆ ಬಿಗ್ ರಿಲೀಫ್ | ಬಿಡುಗಡೆಗೆ ಆದೇಶ

ಆದರೆ, ಶರಣರ ಮೇಲೆ ಇರುವುದು ಗಂಭೀರ ಅಪರಾಧದ ಆರೋಪವಾಗಿರುವುದರಿಂದ ಅವರನ್ನು ನ್ಯಾಯಾಂಗ ಬಂಧನದಲ್ಲಿ ಮುಂದುವರೆಸಲು ಪ್ರಾಸಿಕ್ಯೂಷನ್ ಹೇಳಿದೆ.

ಮತ್ತೊಂದೆಡೆ ಬುಧವಾರ ರಾತ್ರಿ ವೇಳೆಗೆ ಶರಣರ ಜಾಮೀನು ಆದೇಶದ ಪ್ರತಿ ನ್ಯಾಯಾಲಯದಿಂದ ಕಾರಾಗೃಹಕ್ಕೆ ತಲುಪಿದೆ. ಇದರೊಟ್ಟಿಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಕೂಡಾ ಬಾಡಿ ವಾರೆಂಟ್ ಕೇಳಿ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಗೊಂದಲದಲ್ಲಿ ನಾಳೆ ಅಂದರೆ ಗುರುವಾರ ಮುರುಘಾ ಶರಣರ ಬಿಡುಗಡೆ ಆಗುತ್ತದೆಯೋ ಇಲ್ಲವೋ ಎನ್ನುವ ಗೊಂದಲ ಭಕ್ತರಲ್ಲಿ ಮನೆ ಮಾಡಿದೆ.

ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಕೀಲರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದ್ದು, ಇಲ್ಲಿ ಆಗುವ ತೀರ್ಮಾನದ ಮೇಲೆ ಶರಣರ ಭವಿಷ್ಯ ನಿರ್ಧಾರವಾಗಬಹುದು ಎನ್ನಲಾಗುತ್ತಿದೆ.

ಶರಣರ ಪರ ಹಾಗೂ ಸರ್ಕಾರಿ ವಕೀಲರ ವಾದ-ಪ್ರತಿವಾದ

ಶ್ರೀಗಳ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಹೊರಡಿಸಿದ್ದ ಬಾಡಿ ವಾರೆಂಟ್ ಅನ್ನು ನ್ಯಾಯಾಂಗ ಬಂಧನವಾಗಿ ಪರಿವರ್ತನೆ ಮಾಡಬೇಕು ಎಂದು ಸರ್ಕಾರಿ ವಕೀಲರಾದ ಜಗದೀಶ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನ.16ಕ್ಕೆ ಮುಂದೂಡಿದೆ.

ಮುರುಘಾ ಶರಣರ ವಿರುದ್ಧ ಒಟ್ಟು ಎರಡು ಪೋಕ್ಸೋ ಪ್ರಕರಣಗಳಡಿ, ಮೊದಲನೇ ಪ್ರಕರಣಕ್ಕೆ ಜಾಮೀನು ಮಂಜೂರಾಗಿ, ಬಿಡುಗಡೆಗೆ ಆದೇಶವಾಗಿದೆ. ಆದರೆ, ಎರಡನೇ ಪ್ರಕರಣದಲ್ಲಿ ಶರಣರ ವಿರುದ್ಧ ಹೊರಡಿಸಿದ್ದ ಬಾಡಿ ವಾರೆಂಟ್ ಅನ್ನು ನ್ಯಾಯಾಂಗ ಬಂಧನವಾಗಿ ಪರಿವರ್ತಿಸಲು ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ವಕೀಲರು ಮಾಡಿದ್ದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದಕ್ಕೆ ಶರಣರ ಪರ ವಕೀಲರಾದ ಸಂದೀಪ್ ಪಾಟೀಲ್ ತಕರಾರು ಸಲ್ಲಿಸಿದರು.

ಇನ್ನೂ ಮಾಧ್ಯಮಗಳ ಜೊತೆ ಈ ವಿಚಾರವಾಗಿ ಮಾತನಾಡಿದ ಹೈಕೋರ್ಟ್ ನ್ಯಾಯವಾದಿ ಸಂದೀಪ್, ಅನಗತ್ಯವಾಗಿ ಶರಣರನ್ನು ಜೈಲಿನಲ್ಲಿ ಮುಂದುವರೆಯುವಂತೆ ಮಾಡಿ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

chitradurga court

ಮುರುಘಾ ಶರಣರ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಆದೇಶದ ನಂತರ ಕೆಳಗಿನ ನ್ಯಾಯಾಲದಲ್ಲಿ ಶ್ಯೂರಿಟಿ ಸಲ್ಲಿಸಲಾಗಿತ್ತು. ಅದರಂತೆ ಇಂದು ಪರಿಶೀಲನೆ ನಡೆಸಿ ಬಿಡುಗಡೆಗೆ ಆದೇಶ ಮಾಡಿದ್ದಾರೆ.

ಎರಡನೇ ಪ್ರಕರಣದಲ್ಲಿ ಶ್ರೀಗಳು ಬಂಧನ ಅಥವಾ ಕಸ್ಟಡಿಗೆ ಹೋಗಿರಲಿಲ್ಲ. ಕಾನೂನಿನಲ್ಲಿ ಕಸ್ಟಡಿಯಲ್ಲಿದ್ದಾಗ ಮಾತ್ರ ಜಾಮೀನಿಗೆ ಅರ್ಜಿ ಸಲ್ಲಿಸಬಹುದು. ಇದರಲ್ಲಿ ತನಿಖೆ ಮುಗಿದಿದೆ. ಚಾರ್ಜ್‍ಶೀಟ್ ಕೂಡಾ ಹಾಕಲಾಗಿದೆ. ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಕೂಡಾ ಆಗಿದೆ. ಹೀಗಿದ್ದೂ, ಪೊಲೀಸರ ಕಡೆಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬಾಡಿ ವಾರೆಂಟ್ ಇದ್ದರೂ, ಜಾಮೀನು ಸಿಕ್ಕಿರುವುದರಿಂದ ಜೈಲಿನಲ್ಲಿ ಇಟ್ಟುಕೊಳ್ಳಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಸರ್ಕಾರಿ ವಕೀಲ ಜಗದೀಶ್ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ಎರಡನೇ ಪ್ರಕರಣದಲ್ಲಿ ಬಾಡಿ ವಾರೆಂಟ್ ಇರುವುದರಿಂದ ಇಂದು ಜಾಮೀನು ಸಿಕ್ಕಿದ್ದರೂ ಕಸ್ಟಡಿಯಲ್ಲಿ ಇರಬೇಕಾಗುತ್ತದೆ. ಬಾಡಿ ವಾರೆಂಟ್ ನಾಳೆವರೆಗೆ ಮುಂದುವರೆಯಲಿದೆ. ಇದು ಬಾಕಿ ಇರುವುದರಿಂದ ಬಿಡುಗಡೆ ಆಗುವುದಿಲ್ಲ. ನಾವು ಕೂಡಾ ಪೊಲೀಸ್ ಮೂಲಕ ಕಾರಾಗೃಹಕ್ಕೆ ಬಾಡಿ ವಾರೆಂಟ್ ತಲುಪಿಸಲಿದ್ದೇವೆ. ಇಲ್ಲಿ ಕಿರುಕುಳ ನೀಡುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲವೂ ಕಾನೂನು ಪ್ರಕ್ರಿಯೆ ಅಷ್ಟೇ ಎಂದಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BailChitradurgaChitradurga newsDistrict CourtHigh CourtjailmurughashreeReleaseSandeep Patilಕಾರಾಗೃಹಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಮೀನುಜಿಲ್ಲಾ ನ್ಯಾಯಾಲಯಬಿಡುಗಡೆಮುರುಘಾಶ್ರೀಸಂದೀಪ್ ಪಾಟೀಲ್ಹೈಕೋರ್ಟ್‌
Share This Article
Facebook Email Print
Previous Article ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು BREAKING NEWS ಮುರುಘಾ ಶರಣರಿಗೆ ಬಿಗ್ ರಿಲೀಫ್ | ಬಿಡುಗಡೆಗೆ ಆದೇಶ | ಬಿಡುಗಡೆಗೆ ಆದೇಶ
Next Article ಕಿಡಿಗೇಡಿಗಳಿಂದ ಅಡಿಕೆ ತೋಟಕ್ಕೆ ಬೆಂಕಿ ಕಿಡಿಗೇಡಿಗಳಿಂದ ಅಡಿಕೆ ತೋಟಕ್ಕೆ ಬೆಂಕಿ | ಹಿರಿಯೂರು ತಾಲೂಕಿನಲ್ಲಿ ಘಟನೆ
Leave a Comment

Leave a Reply Cancel reply

Your email address will not be published. Required fields are marked *

ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
ಮುಖ್ಯ ಸುದ್ದಿ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up