
CHITRADURG NEWS | 01 MAY 2025
ಚಿತ್ರದುರ್ಗ: ಸರ್ಕಾರ ಕಾರ್ಮಿಕರಿಗಾಗಿ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ, ಇದನ್ನು ಪಡೆಯಲು ಕೆಲವು ನಕಲಿ ಕಾರ್ಮಿಕರು ಕಾರ್ಡ್‌ಗಳನ್ನು ಪಡೆದಿದ್ದಾರೆ. ನಕಲಿ ಕಾರ್ಡ್ ಪಡೆದವರನ್ನು ಪತ್ತೆ ಮಾಡಿ ಅರ್ಹರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಮಾಡಲು ಕಾಂಗ್ರೆಸ್ ಕಾರ್ಮಿಕ ವಿಭಾಗದ ಪದಾಧಿಕಾರಿಗಳ ಕೆಲಸವಾಗಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ತಿಳಿಸಿದರು.
Also Read: ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ


ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಮೇ, ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತ ದೇಶಕ್ಕೆ ಬೆನ್ನೆಲುಬು, ರೈತ ಕೆಲಸ ಮಾಡದಿದ್ದರೆ ಜನರಿಗೆ ಅನ್ನ ಸಿಗವುದಿಲ್ಲ. ಅದೇ ರೀತಿ ಕಾರ್ಮಿಕ ತನ್ನ ಪಾಲಿನ ಕೆಲಸ ಮಾಡದಿದ್ದರೆ ಜನರಿಗೆ ಬೇರೆ ರೀತಿಯ ಕೆಲಸಗಳು ಆಗುವುದಿಲ್ಲ, ದೇಶದ ಆರ್ಥಿಕತೆಯನ್ನು ಕಾರ್ಮೀಕರ ಸಂಖ್ಯೆಯನ್ನು ಪರಿಗಣಿಸಿ ನಿರ್ಧಾರ ಮಾಡಲಾಗುತ್ತದೆ. ಇದರಿಂದಲೇ ಜಿಡಿಪಿಯನ್ನು ಸಹಾ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಹಮ್ಮದ್ ಸೈಯದ್ ಚೋಟು ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿರುವ ಸಂತೋಷ ಲಾಡ್ ಅವರು ಕಾರ್ಮಿಕರ ಕಷ್ಟಗಳನ್ನು ಅರಿತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ವಿವಿಧ ರೀತಿಯ ಸೌಲಭ್ಯವನ್ನು ನೀಡುತ್ತಿದ್ದಾರೆ. ನಮ್ಮ ಕಾರ್ಮಿಕ ವಿಭಾಗಕ್ಕೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಸಮಾವೇಶವನ್ನು ಮುಂದಿನ ದಿನದಲ್ಲಿ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗುವುದು.
ಹಿಂದಿನ ಸರ್ಕಾರ ಕಾರ್ಮಿಕರಿಗೆ ತುಂಬಾ ಅನ್ಯಾಯವನ್ನು ಮಾಡಿತ್ತು ಅದನ್ನು ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಕಾರ್ಮಿಕರಿಗೆ ಸರ್ಕಾರ ಇನ್ನೂ ಹೆಚ್ಚಿನ ರೀತಿಯ ಸೌಲಭ್ಯವನ್ನು ನೀಡುವಂತಾಗಬೇಕಿದೆ ಎಂದರು.
ಬಡಗಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಜಾಕಿರ್ ಹುಸೇನ್ ಮಾತನಾಡಿ, ಕಾರ್ಮಿಕರಿಗೆ ಸರ್ಕಾರ ವಿವಿಧ ರೀತಿಯ ಸೌಲಭ್ಯವನ್ನು ನೀಡಬೇಕಿದೆ, ಕಾರ್ಮಿಕರಿಗೆ ಸರ್ಕಾರದವತಿಯಿಂದ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಕಾರ್ಮಿಕ ವಿಭಾಗದವರು ನೀಡಬೇಕಿದೆ ಎಂದರು.
Also Read: ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..
ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರ್ಮಿಕ ಪಾತ್ರ ಬಹಳಷ್ಟು ಇದೆ. ಅವರು ಹಾಕಿದ ಮತದಿಂದ ಪಕ್ಷ ಅಧಿಕಾರ ಹಿಡಿಯಲು ಸಹಕಾರಿಯಾಗಿದೆ. ಇದನ್ನು ಮನಗಂಡು ಶಾಸಕರಾದವರು ಕಾರ್ಮಿಕರ ಹಿತ ಕಾಯಬೇಕಿದೆ. ಅವರನ್ನು ಎಂದಿಗೂ ಸಹಾ ಮರೆಯಬಾರದು, ಕಾರ್ಮಿಕವನ್ನು ನಮ್ಮ ಜೊತೆಯಲ್ಲಿ ಇಟ್ಟುಕೊಂಡಲ್ಲಿ ಮುಂದಿನ ಬಾರಿಯೂ ಸಹಾ ನಮ್ಮ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನವನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟಿಪ್ಪು ಖಾಸಿಂಆಲಿ, ಪ್ರಕಾಶ ರಾಮನಾಯ್ಕ್, ಖುದ್ದುಸ್, ಮಂಜುನಾಥ್, ಅಕ್ಬರ್, ಸಮೀವುಲ್ಲಾ, ಯೂಸಿಫ್, ಹಸೀನ, ಅಬ್ದುಲ್ ರಹಿಂ, ಜ್ಯೋತಿ ಲಕ್ಷ್ಮೀ, ನಾಗರಾಜ್, ಸಂಪತ್ ಕುಮಾರ್, ಮೈಲಾರಪ್ಪ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
