By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: KRS ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ | ಬೆಂಗಳೂರಿನಲ್ಲಿ ಮಹತ್ವದ ಸಭೆ | ಪ್ರವಾಸಿ ತಾಣವಾಗಿ ರೂಪಿಸಲು ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » KRS ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ | ಬೆಂಗಳೂರಿನಲ್ಲಿ ಮಹತ್ವದ ಸಭೆ | ಪ್ರವಾಸಿ ತಾಣವಾಗಿ ರೂಪಿಸಲು ಸೂಚನೆ

ಮುಖ್ಯ ಸುದ್ದಿ

KRS ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ | ಬೆಂಗಳೂರಿನಲ್ಲಿ ಮಹತ್ವದ ಸಭೆ | ಪ್ರವಾಸಿ ತಾಣವಾಗಿ ರೂಪಿಸಲು ಸೂಚನೆ

News Desk Chitradurga News
Last updated: 11 June 2025 06:53
News Desk Chitradurga News
3 weeks ago
Share
ವಾಣಿವಿಲಾಸ ಸಾಗರ
ವಾಣಿವಿಲಾಸ ಸಾಗರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 June 2025

ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯವನ್ನು ಕೆಆರ್‌ಎಸ್‌ ಮಾದರಿಯಲ್ಲಿ ಪ್ರವಾಸಿ ತಾಣವಾಗಿ ರೂಪಿಸಲು ಯೋಜನೆ ರೂಪಿಸಲಾಗಿದೆ.

ಮುಖ್ಯಾಂಶಗಳು:

  • ಕೆಆರ್‌ಎಸ್‌ ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ,
  • ಹಿರಿಯೂರು-ವಿವಿಸಾಗರ ಚತುಷ್ಪಥ ರಸ್ತೆ,
  • ಬೆಂಗಳೂರಿನಲ್ಲಿ ಸಚಿವ ಸುಧಾಕರ್‌ ಸಭೆ

ಇದರ ಮೊದಲ ಹಂತವಾಗಿ ಹಿರಿಯೂರಿನಿಂದ ವಿವಿ ಸಾಗರದವರೆಗಿನ ದ್ವಿಪಥದ ರಸ್ತೆಯನ್ನು ಚತುಷ್ಪಥವಾಗಿ ಪರಿವರ್ತಿಸಿ ಅಭಿವೃದ್ಧಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿ | ಆಸಕ್ತ 70 ರೈತರಿಗೆ ಅವಕಾಶ 

ಹಿರಿಯೂರು ಪಟ್ಟಣದ ವಿವಿಪುರ ಕ್ರಾಸ್‍ನಿಂದ ವಿವಿಪುರ ಗ್ರಾಮದ ಕಣಿವೆ ಮಾರಮ್ಮ ದೇವಸ್ಥಾನದವರೆಗೆ ಇರುವ 17.50 ಕಿ.ಮೀ ರಸ್ತೆಯನ್ನು ಅಗಲೀಕರಣ ಮಾಡಲು ಅಗತ್ಯ ಕ್ರಮ ಜರುಗಿಸಲು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯವನ್ನು ಕೆ.ಆರ್.ಎಸ್. ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದ್ದು, ಈ ಸಂಬಂಧ ಮೊದಲನೇ ಹಂತದಲ್ಲಿ ವಿವಿಪುರ ಕ್ರಾಸ್‍ನಿಂದ ವಿವಿಪುರ ಗ್ರಾಮದವರೆಗೆ ಹಾಲಿ ಇರುವ ದ್ವಿ ಪಥದ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಕೈಗೊಳ್ಳಬೇಕಾದ ಭೂಸ್ವಾಧೀನ ಪ್ರಕ್ರಿಯೆಗಳಿಗೆ ಚಾಲನೆ ನೀಡಲು ತಿಳಿಸಿದರು.

ಪ್ರಸ್ತುತ ಈ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು, ಭೂಸ್ವಾಧೀನಕ್ಕೆ ತಗಲಬಹುದಾದ ವೆಚ್ಚವನ್ನು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಳಿಸಲು ಮತ್ತು ನಾಲ್ಕು ಪಥದ ರಸ್ತೆ ನಿರ್ಮಾಣ ಮತ್ತು ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿಗಳನ್ನು ಜಲ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ಬರುವ ವಿಶ್ವೇಶ್ವರಯ್ಯ ಜಲ ನಿಗಮದಿಂದ ಕೈಗೆತ್ತಿಕೊಳ್ಳಲು ಮತ್ತು ಈ ಪ್ರಸ್ತಾವನೆಗೆ ಆಗಬಹುದಾದ ವಿಸ್ತøತವಾದ ಯೋಜನಾ ವರದಿಯನ್ನು ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಯಿತು.

ಇದನ್ನೂ ಓದಿ: ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ BIRTHDAY ಆಚರಣೆ

ಭೂಸ್ವಾಧೀನ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಸಹಕಾರದೊಂದಿಗೆ ಜಂಟಿ ಸರ್ವೇ ಮಾಡಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲು ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯ ನಾರಾಯಣ, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಹೆಚ್.ಲಂಬಾಣಿ, ಕಾರ್ಯಪಾಲಕ ಇಂಜಿನಿಯರ್ ಬಾರಿಕರ ಚಂದ್ರಪ್ಪ, ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಹಿರಿಯೂರು ತಹಶೀಲ್ದಾರ್ ರಾಜೇಶ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDevelopmentHiriyurKannada Latest NewsKannada NewsKRSMinister D. SudhakarTourist DestinationVV SagarVVIPURAಅಭಿವೃದ್ಧಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆಆರ್‍ಎಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರವಾಸಿ ತಾಣವಿವಿ ಸಾಗರವಿವಿಪುರಸಚಿವ ಡಿ.ಸುಧಾಕರ್‌ಹಿರಿಯೂರು
Share This Article
Facebook Email Print
Previous Article ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿ | ಆಸಕ್ತ 70 ರೈತರಿಗೆ ಅವಕಾಶ 
Next Article today bhavishya Astrology: ದಿನ ಭವಿಷ್ಯ | ಜೂನ್ 11 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಶುಭ ಸುದ್ದಿ, ಆರೋಗ್ಯದ ಬಗ್ಗೆ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up