CHITRADURGA NEWS |18 OCTOBER 2025
ಹೊಳಲ್ಕೆರೆ: ನನ್ನ ಮೇಲೆ ವಿಶ್ವಾಸವಿಟ್ಟು ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿದ್ದೀರಿ. ನಿಮ್ಮಗಳ ಋಣ ತೀರಿಸಬೇಕೆಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 68 ಸಾವಿರ ದಾಟಿದ ರಾಶಿ ಅಡಿಕೆ ಬೆಲೆ
ಭರಮಸಾಗರ ಹೋಬಳಿ ಇಸಾಮುದ್ರ ಗ್ರಾಮದಲ್ಲಿ 6.55 ಕೋಟಿ ರೂ.ವೆಚ್ಚದಲ್ಲಿ ಇಸಾಮುದ್ರ ಗ್ರಾಮದಿಂದ ಭರಮಸಾಗರದವರೆಗೂ ನೂತನ ಡಾಂಬರ್ ರಸ್ತೆ ನಿರ್ಮಾಣ ನೂತನ ಸಮುದಾಯ ಭವನ, ದೇವಸ್ಥಾನ ಮುಂಭಾಗ ಸಿ.ಸಿ.ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಹಣ ಕೊಡಲಿಲ್ಲ ಎಂದರೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆಂದಾಗ ತತಕ್ಷಣ 650 ಕೋಟಿ ರೂ.ಗಳನ್ನು ಮಂಜೂರು ಮಾಡಿದರು.
ಹಾಗಾಗಿ ಭರಮಸಾಗರ ಕೆರೆ ದೊಡ್ಡ ಸಮುದ್ರದಂತೆ ಕಾಣುವ ರೀತಿಯಲ್ಲಿ ಅಭಿವೃದ್ದಿಪಡಿಸಿದ್ದೇನೆ. ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳ ಹೂಳು ತೆಗೆಸಿ ಜಾಲಿ ಗಿಡಗಳನ್ನು ನಿರ್ಮೂಲನೆ ಮಾಡಿ ಏರಿ ರಿಪೇರಿ ಮಾಡಿಸಿದ್ದೇನೆ ಎಂದರು.
ಹೊಳಲ್ಕೆರೆ ತಾಲ್ಲೂಕಿನಾದ್ಯಂತ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿದ್ದೇನೆ. ರೈತರಿಗೆ ವಿದ್ಯುತ್, ಶಾಲಾ-ಕಾಲೇಜು, ಹೈಟೆಕ್ ಆಸ್ಪತ್ರೆ ಬಸ್‍ನಿಲ್ದಾಣಗಳನ್ನು ನಿರ್ಮಿಸಿದ್ದೇನೆ.
ಇದನ್ನೂ ಓದಿ: ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವರ ಭೇಟಿ | 200 ಬೆಡ್ ಆಧುನಿಕ ಸುಸಜ್ಜಿತ ಆಸ್ಪತ್ರೆ ನಿರ್ಮಾಣ
ಅಜ್ಜಪ್ಪನಹಳ್ಳಿ ಬಳಿ 250 ಕೋಟಿ ರೂ.ವೆಚ್ಚದಲ್ಲಿ 220 ಮೆ.ವ್ಯಾ. ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಇನ್ನೂ ಆರು ತಿಂಗಳೊಳಗೆ ಪೂರ್ಣಗೊಂಡು ದಿನಕ್ಕೆ ಹತ್ತು ಗಂಟೆಗಳ ಕಾಲ ರೈತರಿಗೆ ವಿದ್ಯುತ್ ನೀಡುತ್ತೇನೆ. ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದ್ದೇನೆ ಎಂದರು.
ಭರಮಸಾಗರ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎನ್.ಟಿ.ಬಸವರಾಜ್, ಶೈಲೇಶ್, ಮಂಜುನಾಥ್, ಕಲ್ಲೇಶ್, ಗ್ರಾಮದ ಮುಖಂಡರುಗಳಾದ ಸಿದ್ದಬಸಪ್ಪ, ಸಿದ್ದಲಿಂಗಣ್ಣ, ಕಲ್ಲೇಶಪ್ಪ, ರುದ್ರಮುನಿ, ಹಿರೇಬೆನ್ನೂರು ನಾಗರಾಜ್, ಚಂದ್ರಶೇಖರ್, ರಾಜಣ್ಣ, ತಿಪ್ಪೇಶ್, ಕೋಟೇಶ್, ಅಂಜಿ, ಅರುಣ್‍ಕುಮಾರ್, ಗುತ್ತಿಗೆದಾರ ಬಲರಾಮ್‍ರೆಡ್ಡಿ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
