CHITYRADURG NEWS | 21 SEPTEMBER 2025
ಹೊಳಲ್ಕೆರೆ: ತಾಲ್ಲೂಕಿನ ಕೋಮರನಹಳ್ಳಿ ಗ್ರಾಮದಲ್ಲಿ 2.20 ಕೋಟಿ ರೂ.ವೆಚ್ಚದಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣದ ಕಾಮಗಾರಿ ಮತ್ತು ಕೋಮರನಹಳ್ಳಿಯಿಂದ ತೇಕಲವಟ್ಟಿವರೆಗೂ ನೂತನ ಡಾಂಬರ್ ರಸ್ತೆ ನಿರ್ಮಾಣ, ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು.
ಇದನ್ನೂ ಓದಿ: ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ
ನಂತರ ಮಾತನಾಡಿದ ಶಾಸಕರು, ಒಂದೊಂದು ಮನೆಯಲ್ಲಿ ಎರಡು ಮೂರು ಕುಟುಂಬಗಳಿವೆ ಎನ್ನುವ ಕಾರಣಕ್ಕಾಗಿ ಒಂದು ಕೋಟಿ ರೂ.ಗಳಲ್ಲಿ ನಿವೇಶನವಾಗಿದೆ. ಸಿ.ಸಿ,ರಸ್ತೆ ಮಾಡಿಸಿದ್ದೇನೆ. ಮೊದಲ ಬಾರಿಗೆ ಇಲ್ಲಿಗೆ ಬಂದಾಗ ಸಂಚರಿಸಲು ರಸ್ತೆಯಿರಲಿಲ್ಲ.
ಒಂದು ಬೂತ್ ನಿರ್ಮಾಣ ಮಾಡಿ ಮತದಾನದ ಮೂಲಕ ನಿಮ್ಮ ಹಕ್ಕು ಚಲಾಯಿಸುವ ಅವಕಾಶ ಕಲ್ಪಿಸಿದ್ದೇನೆ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹತ್ತು ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಸಿ.ಸಿ.ರಸ್ತೆಗೆ 20 ಲಕ್ಷ ರೂ.ಖರ್ಚು ಮಾಡಿದ್ದೇನೆ. ಸಣ್ಣ ಹಳ್ಳಿಗೆ ಎರಡು ಕೋಟಿ ಇಪ್ಪತ್ತು ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದೇನೆ ಎಂದು ಹೇಳಿದರು.
23 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದೆ. ಇನ್ನು ಎರಡು ತಿಂಗಳಲ್ಲಿ ಉದ್ಘಾಟನೆಯಾಗಲಿದೆ ಎಂದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಎಂಡೊಸ್ಕೋಫಿ ಮತ್ತು ಕೊಲೋನೋಸ್ಕೋಪಿ ಸೇವೆ ಆರಂಭ
ಉಪ್ಪರಿಗೇನಹಳ್ಳಿಯಲ್ಲಿ ಇಂಗ್ಲಿಷ್ ಮೀಡಿಯಂ ಶಾಲೆ ಕೊಡುತ್ತೇನೆ. ಇದಲ್ಲದೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೂಡ ಮಂಜೂರು ಮಾಡಿಸುತ್ತೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ನನ್ನ ಜವಾಬ್ದಾರಿ ಎಂದು ಹೇಳಿದರು.
ಬಿಜೆಪಿ ಮುಖಂಡ ಚಂದ್ರಪ್ಪ ಸೇರಿದಂತೆ ಗ್ರಾಮ ಮುಖಂಡರು, ಗ್ರಾಮಸ್ಥರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
