
CHITRADURGA NEWS | 05 AUGUST 2025
ಹೊಳಲ್ಕೆರೆ: ತಾಲೂಕಿನ ಗಂಗಸಮುದ್ರ ಗ್ರಾಮದಲ್ಲಿ ರೂ.2 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ಸಲ್ಲಿಸಿದರು
ನಂತರ ಮಾತನಾಡಿದ ಶಾಸಕರು, ಸರ್ಕಾರ ಉಚಿತ ಗ್ಯಾರೆಂಟಿಗಳಿಗೆ ಹಣ ಬಳಸುತ್ತಿರುವುದರಿಂದ ನಮಗೆ ಅನುದಾನವಿಲ್ಲವೆಂದು ಕಾಂಗ್ರೆಸ್ ಶಾಸಕರುಗಳು ಗೋಳಾಡುತ್ತಿದ್ದಾರೆ. ನಾನು ಕೋಟಿ ಕೋಟಿ ಹಣ ತಂದು ದಿನವೂ ಒಂದಲ್ಲ ಒಂದು ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸುತ್ತಿದ್ದೇನೆ. ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇನೆ. ಡ್ಯಾಂ ಬಳಿ ನಾಲ್ಕು ಪಂಪ್‍ಗಳನ್ನು ಚಾಲು ಮಾಡಿದರೆ ಸಾಕು ತಾಲ್ಲೂಕಿನಲ್ಲಿರುವ 37 ಕೆರೆಗಳು ತುಂಬಿ ಹರಿಯುತ್ತವೆ ಎಂದು ತಿಳಿಸಿದರು.
ಇದನ್ನೂ ಓದಿ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರು
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಮಹೇಶ್, ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಶಕುಂತಲಮ್ಮ, ದಾನವೇಂದ್ರ ದಾನೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಮೇಶ್, ಸದಸ್ಯರುಗಳಾದ ಚಂದ್ರಶೇಖರ್, ಜಯಣ್ಣ, ಚಂದ್ರಕಲಾ, ಮಾರುತೇಶ್, ಮಂಜುನಾಥ್, ಹಳ್ಳಪ್ಪ, ರಮೇಶ್, ಆನಂದ್, ರುದ್ರಣ್ಣ, ಯುವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
