By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    10 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
    10 hours ago
    ನೀಟ್ ಮರು ಪರೀಕ್ಷೆ | ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಡಿಸಿ ಸೂಚನೆ 
    13 hours ago
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು
    ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ
    22 hours ago
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    6 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    7 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 day ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    7 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    10 hours ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    11 hours ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    1 day ago
    mixed with fruits is bad for your health
    ಈ ವಸ್ತುಗಳನ್ನು ಹಣ್ಣುಗಳೊಂದಿಗೆ ಬೆರೆಸಿ ತಿಂದರೆ ಆರೋಗ್ಯ ಕೆಡುತ್ತದೆಯಂತೆ
    1 day ago
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    2 days ago
Reading: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ 2 ವರ್ಷ ಪೂರ್ಣ | ಎಂ.ಕೆ. ತಾಜ್‍ಪೀರ್ ಪತ್ರಿಕಾಗೋಷ್ಠಿ | ಅಭಿವೃದ್ಧಿ ಕಾರ್ಯಗಳು ತೃಪ್ತಿ ತಂದಿವೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ 2 ವರ್ಷ ಪೂರ್ಣ | ಎಂ.ಕೆ. ತಾಜ್‍ಪೀರ್ ಪತ್ರಿಕಾಗೋಷ್ಠಿ | ಅಭಿವೃದ್ಧಿ ಕಾರ್ಯಗಳು ತೃಪ್ತಿ ತಂದಿವೆ

News Desk Chitradurga News
Last updated: 28 February 2026 08:14
News Desk Chitradurga News
4 months ago
Share
ಸುದ್ದಿಗೋಷ್ಠಿಯಲ್ಲಿ ಎಂ.ಕೆ. ತಾಜ್‍ಪೀರ್ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಎಂ.ಕೆ. ತಾಜ್‍ಪೀರ್ ಮಾತನಾಡಿದರು
SHARE

CHITRADURGA NEWS | 28 FEBRUARY 2026

ಚಿತ್ರದುರ್ಗ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ತರುವಾಯ ವಿವಿಧ ಬಡಾವಣೆಗಳ ಉದ್ಯಾನವನಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಮಕ್ಕಳ ಆಟಿಕೆ ಸಾಮಗ್ರಿಗಳ ಅಳವಡಿಕೆ, ಕೆರೆಗಳ ಪುನಃಶ್ಚೇತನಕ್ಕೆ ಆದ್ಯತೆ ನೀಡಿ ಕೆಲಸ ನಿರ್ವಹಿಸಿದ್ದೇನೆ. ಅಧಿಕಾರವಧಿಯ ಅಭಿವೃದ್ಧಿ ಕಾರ್ಯಗಳು ತೃಪ್ತಿ ತಂದಿವೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಹೇಳಿದರು.

ಇದನ್ನೂ ಓದಿ: ಒಳ ಮೀಸಲಾತಿ ಅನುಗುಣವಾಗಿ ಕೂಡಲೇ 56432 ಹುದ್ದೆ ಭರ್ತಿಗೆ ಗೋವಿಂದ ಕಾರಜೋಳ ಆಗ್ರಹ 

ಎರಡು ವರ್ಷಗಳು ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಧಿಕಾರದಿಂದ ನಿರ್ಗಮಿಸುತ್ತಿರುವ ಪ್ರಯುಕ್ತ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೈಗೊಂಡ ಪ್ರಮುಖ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಎಂ.ಕೆ.ತಾಜ್‍ಪೀರ್ ಮಾತನಾಡಿದರು.

ನಗರದ ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲಾಗಿದ್ದು, ಸುಮಾರು ರೂ. 1.75 ಕೋಟಿ ವೆಚ್ಚದಲ್ಲಿ ಕೆಳಗೋಟೆಯ ಚನ್ನಕೇಶವ ಉದ್ಯಾನವನ, ಗಾಂಧಿನಗರ, ಪಿಳ್ಳೆಕೆರೆನಹಳ್ಳಿ ಗ್ರಾಮ, ವಿದ್ಯಾನಗರ ಹಾಗೂ ಓ.ಎಂ.ಸಿ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ ಮತ್ತು ಅಲಂಕಾರಿಕ ದೀಪಗಳ ಅಳವಡಿಕೆ ಪೂರ್ಣಗೊಳಿಸಲಾಗಿದೆ. 

ಐತಿಹಾಸಿಕ ತಿಮ್ಮಣ್ಣನಾಯಕನ ಕೆರೆಯ ಏರಿಯ ಮೇಲೆ ಪಾದಚಾರಿ ಮಾರ್ಗ ಹಾಗೂ ದೀಪಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಟೆ ಈಶ್ವರ ದೇವಸ್ಥಾನ ಹಾಗೂ ರಾಮದೇವರ ವಡ್ಡು ಬಳಿ ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯಗೊಂಡಿವೆ. ನಾಗರಿಕರ ಆರೋಗ್ಯ ಮತ್ತು ಮಕ್ಕಳ ಮನರಂಜನೆಗಾಗಿ ವಿಶೇಷ ಒತ್ತು ನೀಡಲಾಗಿದ್ದು, ಗಾಂಧಿನಗರ, ರಾಮದೇವರ ವಡ್ಡು ಹಾಗೂ ತಿಮ್ಮಣ್ಣನಾಯಕನ ಕೆರೆ ಏರಿಯ ಮೇಲೆ ರೂ.75 ಲಕ್ಷ ವೆಚ್ಚದಲ್ಲಿ ಬಯಲು ಜಿಮ್ ಹಾಗೂ ಆಟಿಕೆಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ನಗರಸಭೆ ಮಾಜಿ ಸದಸ್ಯ ಬಾಂಡ್ ತಿಪ್ಪೇಸ್ವಾಮಿ ನಿಧನ

ಕೆಂಚಪ್ಪ ಸ್ವಾಮಿ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ, ಹಳೇ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಪೆವಿಲಿಯನ್ ನಿರ್ಮಾಣಕ್ಕೆ ಒಟ್ಟು 45 ಲಕ್ಷ ವ್ಯಯಿಸಲಾಗಿದೆ. ಮೊದಲ ಹಂತದಲ್ಲಿ ಪ್ರಾಧಿಕಾರದಿಂದ ಸುಮಾರು 500 ಜನರು ಕುಳಿತು ವೀಕ್ಷಿಸಬಹುದಾದ ಪೆವಿಲಿಯನ್ ಹಳೇ ಮಾಧ್ಯಮ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿದೆ. ಎರಡನೇ ಹಂತದಲ್ಲಿ ಈ ಪೆವಿಲಿಯನ್‍ಗೆ ಕೆನೋಪಿ ಅಳವಡಿಸುವ ಯೋಜನೆಗೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ.

2025-2026ನೇ ಸಾಲಿನಲ್ಲಿ ಸುಮಾರು ರೂ.2.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಮೆದೇಹಳ್ಳಿ ಪಂಚಾಯಿತಿ ವ್ಯಾಪ್ತಿ, ಕೆಳಗೋಟೆ, ಪಿಳ್ಳೆಕೆರೆನಹಳ್ಳಿ ಹಾಗೂ ಎಂ.ಕೆ.ಹಟ್ಟಿ ಗ್ರಾಮಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಬಿ.ವಿ.ಕೆ.ಎಸ್, ನಿಜಲಿಂಗಪ್ಪ ಉದ್ಯಾನವನ, ಹೌಸಿಂಗ್ ಬೋರ್ಡ್ ಕಾಲೋನಿ ಸೇರಿದಂತೆ ವಿವಿಧೆಡೆ ಜಿಮ್ ಉಪಕರಣಗಳ ಅಳವಡಿಕೆಗೆ ರೂ. 01 ಕೋಟಿ ಮೀಸಲಿಡಲಾಗಿದೆ. ಕಿರುಬನಕಲ್ಲು ಹಾಗೂ ಮೆದೇಹಳ್ಳಿಯಲ್ಲಿ ಎರಡು ಹೊಸ ಉದ್ಯಾನವನಗಳ ನಿರ್ಮಾಣಕ್ಕೆ ರೂ. 1.10 ಕೋಟಿ ಅನುದಾನದ ಆರ್ಥಿಕ ಅನುಮೋದನೆ ದೊರೆತಿದೆ ಎಂದರು.

ಮುರುಘಾಮಠದ ಮುಂಭಾಗದ ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸಲಾಗಿದೆ. ಮೊದಲ ಹಂತದ ರೂ. 5.00 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದರೆ, ಎರಡನೇ ಹಂತದ ರೂ. 2.27 ಕೋಟಿ ವೆಚ್ಚದ ಕಾಮಗಾರಿಯು ಟೆಂಡರ್ ಪ್ರಕ್ರಿಯೆಯಲ್ಲಿದೆ.  

ಇದನ್ನೂ ಓದಿ: ಅಡಿಕೆ ಧಾರಣೆ | 27 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್‌

ತಿಮ್ಮಣ್ಣನಾಯಕ ಕೆರೆಯ ಸೌಂದರ್ಯೀಕರಣದ ಅಡಿಯಲ್ಲಿ ಪಾದಚಾರಿ ಮಾರ್ಗ ಮತ್ತು ಎಲ್‍ಇಡಿ ದೀಪಗಳ ಅಳವಡಿಕೆಗೆ ಚಾಲನೆ ನೀಡಲಾಗಿದೆ. ಚಿತ್ರದುರ್ಗ ನಗರಸಭೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 15 ರಿಂದ 20 ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಗಾಂಧಿನಗರ ಹಾಗೂ ಮೆದೇಹಳ್ಳಿ ವ್ಯಾಪ್ತಿಯ ಪಾರ್ಕ್‍ಗಳು ಸೇರಿವೆ ಎಂದು ಎಂ.ಕೆ.ತಾಜ್‍ಪೀರ್ ತಿಳಿಸಿದರು.

ತುರುವನೂರು ರಸ್ತೆಯ ಮೇಲೆ ವಾಕಿಂಗ್ ಮಾಡುತ್ತಿದ್ದ ಪಾದಚಾರಿಗೆ ಅಪಘಾತವಾದ ಹಿನ್ನಲೆಯಲ್ಲಿ ಜನರು ರಸ್ತೆಯ ಮೇಲೆ ನಡೆಯುವುದನ್ನು ತಪ್ಪಿಸಲು ರೈಲ್ವೆ ಅಂಡರ್‍ಪಾಸ್ ಸಮೀಪದ ಪಾರ್ಕ್‍ನಲ್ಲಿ ವಾಕಿಂಗ್ ಪಾಥ್ ವ್ಯವಸ್ಥೆ ಮಾಡಲಾಗಿದೆ. ರಾಮದೇವ್ ಬಡಾವಣೆ, ತಾಜ್‍ಪೀರ್ ಬಡಾವಣೆ, ಬಿವಿಕೆ ಲೇಔಟ್ ನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಪ್ರಾಧಿಕಾರವು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತದೆ, ಆದರೆ ಅವುಗಳನ್ನು ಉಳಿಸುವ, ನಿರ್ವಹಿಸುವ ಜವಾಬ್ದಾರಿ ಸಾರ್ವಜನಿಕರ ಮೇಲಿದೆ. ಪಾರ್ಕ್‍ಗಳಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ಗಿಡಗಳನ್ನು ಬೆಳೆಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ಎಂ.ಕೆ.ತಾಜ್‍ಪೀರ್ ಕೋರಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನಾನು ಬಯಸದೆ ಬಂದ ಭಾಗ್ಯವಾಗಿದೆ, ಅನಿರೀಕ್ಷಿತವಾಗಿ ಒದಗಿ ಬಂದ ಅಧಿಕಾರವನ್ನು ಬಳಸಿಕೊಂಡು ಪ್ರಾಧಿಕಾರ ಎಂದರೆ ಕೇವಲ ಲೇಔಟ್ ಅನುಮೋದನೆ ಮತ್ತು ಎನ್‍ಒಸಿ ನೀಡುವುದಕ್ಕೆ ಸೀಮಿತ ಎಂಬ ಕಲ್ಪನೆಯನ್ನು ಬದಲಿಸಿ, ಅನೇಕ ಸಾರ್ವಜನಿಕ ಸ್ನೇಹಿ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. 

ಇದನ್ನೂ ಓದಿ: NIELIT ನೇಮಕಾತಿ | ಮಾರ್ಚ್ 11 ರಂದು ಸಂದರ್ಶನ

ಅಧ್ಯಕ್ಷನಾಗಿ 24 ತಿಂಗಳ ಅಧಿಕಾರಾವಧಿಯಲ್ಲಿ ಕನಿಷ್ಠ 24 ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಿದ್ದೆ. ನಿರೀಕ್ಷೆಗಿಂತಲೂ ಹೆಚ್ಚಿನ ಕಾಮಗಾರಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದಾಗಿ ಎಂ.ಕೆ.ತಾಜ್‍ಪೀರ್ ತೃಪ್ತಿ ವ್ಯಕ್ತಪಡಿಸಿದರು.

ನಗರದ ಅಭಿವೃದ್ಧಿಗೆ ಹೊಸ ಮಾಸ್ಟರ್ ಪ್ಲಾನ್:  

ಚಿತ್ರದುರ್ಗ ನಗರದ ಹೊಸ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಿಕೊಡಲಾಗಿದೆ. ಅಧಿಕಾರಿಗಳ ಹಂತದಲ್ಲಿ ಮಾಸ್ಟರ್ ಪ್ಲಾನ್‍ಗೆ ಒಪ್ಪಿಗೆ ದೊರೆತಿದೆ. ಅಂತಿಮವಾಗಿ ನಗರಾಭಿವೃದ್ಧಿ ಸಚಿವರಾದ ಬಿ.ಎ. ಸುರೇಶ್ ಅವರ ಅನುಮೋದನೆ ದೊರೆಯಬೇಕಿದೆ. ಈ ಕುರಿತು ಶಾಸಕರು ಹಾಗೂ ನಗರಸಭೆ ಸದಸ್ಯರ ನಿಯೋಗ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದೆ. ಜನಪ್ರತಿನಿಧಿಗಳ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವ ಸಚಿವರು, ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ. 

ಹೊಸ ಮಾಸ್ಟರ್ ಪ್ಲಾನ್‍ಗೆ ಅನುಮೋದನೆ ದೊರತರೆ ಐತಿಹಾಸಿಕ ಕೋಟೆ ಸಂಪರ್ಕಿಸುವ ರಿಂಗ್ ರೋಡ್ ಸಂಪರ್ಕ ದೊರಕಲಿದೆ. ಸದ್ಯ ನಗರದಲ್ಲಿ ಪ್ರಾಧಿಕಾರದಿಂದ ಯಾವುದೇ ಲೇಔಟ್ ಅಭಿವೃದ್ದಿ ಪಡಿಸಿಲ್ಲ. ಪ್ರಾಧಿಕಾರದೊಂದಿಗೆ 50:50 ಅನುಪಾತದಲ್ಲಿ ಅಭಿವೃದ್ಧಿ ಪಡಿಸಲು ಖಾಸಗಿ ಜಮೀನಿನ ರೈತರು ಮುಂದೆ ಬರುತ್ತಿಲ್ಲ. ಸದ್ಯ 70:30 ಅನುಪಾತದಲ್ಲಿ ಖಾಸಗಿ ಡೇವಲಪರ್ಸ್ ಬಡಾವಣೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ಎಂ.ಕೆ.ತಾಜ್‍ಪೀರ್ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 27 | ಮೆಕ್ಕೆಜೋಳ, ಕಡಲೆ ಕಾಳು ರೇಟ್ ಎಷ್ಟಿದೆ?

ಪ್ರಾಧಿಕಾರದ ಸದಸ್ಯರಾದ ದೇವರಾಜ್, ಅಂಜನಪ್ಪ, ಸುರೇಶ್ ಹಾಗೂ ಮೀನಾಕ್ಷಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsM.K. TajpirUrban Development Authorityಎಂ.ಕೆ. ತಾಜ್‍ಪೀರ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ನಗರಾಭಿವೃದ್ಧಿ ಪ್ರಾಧಿಕಾರ
Share This Article
Facebook Email Print
Previous Article ದ್ವಿದಳ ಧಾನ್ಯಗಳು ನಿಮ್ಮ ರಕ್ತನಾಳಗಳಲ್ಲಿನ ಕೊಳೆಯನ್ನು ತೆಗೆದುಹಾಕಲು ಈ 4 ದ್ವಿದಳ ಧಾನ್ಯಗಳನ್ನು ಸೇವಿಸಿ
Next Article ಪತ್ರಿಕಾ ಭವನದಲ್ಲಿ ಆಪತ್ ರಕ್ಷಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಪತ್ರಿಕಾ ಭವನದಲ್ಲಿ ಆಪತ್ ರಕ್ಷಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
ಮುಖ್ಯ ಸುದ್ದಿ
buffalo milk or cow milk
ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
Life Style
cleansing the stomach, cumin water or desi ghee water
ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up