
CHITRADURGA NEWS | 11 AUGUST 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಧನಂಜಯ ಹಂಪಯ್ಯನಮಾಳಿಗೆ ಇವರಿಗೆ ಪ್ರವಾಸಿ ಮಂದಿರದಲ್ಲಿ ಉಪ್ಪಾರ ಸಮಾಜದಿಂದ ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: Tourist spot; ನಮ್ಮೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ವೋಟ್ ಮಾಡಿ | ನಮ್ಮ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ಇಲ್ಲಿದೆ ನೋಡಿ

ಈ ವೇಳೆ ಜಿಲ್ಲಾ ಉಪ್ಪಾರ ಸಮಾಜದ ಮಾಜಿ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಕರ್ನಾಟಕ ರಾಜ್ಯ ರೈತ ಸಂಘದವರು ನಂಬಿಕೆಯಿಟ್ಟು ಧನಂಜಯ ಹಂಪಯ್ಯನಮಾಳಿಗೆ ಇವರಿಗೆ ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದ್ದಾರೆ. ಹೆಗಲ ಮೇಲೆ ಈಗ ಹೆಚ್ಚಿನ ಭಾರವಿರುವುದರಿಂದ ಜಿಲ್ಲೆಯ ರೈತರ ಸಮಸ್ಯೆ, ಕುಂದುಕೊರತೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡಬೇಕೆಂದು ಎಂದು ಹೇಳಿದರು.
ರಾಜ್ಯ ಉಪ್ಪಾರ ಸಂಘದ ವಕ್ತಾರ ಎಂ.ಪಿ.ಶಂಕರ್ ಮಾತನಾಡುತ್ತ ಹಸಿರು ಶಾಲಿಗೆ ತನ್ನದೆ ಆದ ಶಕ್ತಿಯಿದೆ. ದೇಶಕ್ಕೆ ಅನ್ನ ನೀಡುವ ರೈತ ನಾನಾ ರೀತಿಯ ಸಮಸ್ಯೆ ಸವಾಲುಗಳನ್ನು ಎದುರಿಸುತ್ತಿದ್ದಾನೆ. ಆಳುವ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸಿದಾಗ ಎದೆಗುಂದದೆ ಹೋರಾಟಕ್ಕೆ ಇಳಿಯಬೇಕು ಎಂದು ಧನಂಜಯ ಹಂಪಯ್ಯನಮಾಳಿಗೆಗೆ ತಿಳಿಸಿದರು.
ಬಳ್ಳಾರಿ ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ಯರ್ರಿಸ್ವಾಮಿ ಮಾತನಾಡಿ ಕಾರ್ಯಕ್ಷಮತೆ, ಬದ್ದತೆ ಗುರುತಿಸಿ ಕರ್ನಾಟಕ ರಾಜ್ಯ ರೈತ ಸಂಘ ಧನಂಜಯ ಹಂಪಯ್ಯನಮಾಳಿಗೆ ಇವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಅನ್ನದಾತ ರೈತನ ಬೆಳೆಗೆ ಇದುವರೆವಿಗೂ ಯಾವ ಸರ್ಕಾರವೂ ವೈಜ್ಞಾನಿಕ ಬೆಲೆ ನೀಡಿಲ್ಲ. ಸಾಲ ತೀರಿಸಲು ಆಗದೆ ರೈತ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾನೆ. ಬ್ಯಾಂಕ್‍ಗಳು ರೈತರನ್ನು ಸಾಲಕ್ಕೆ ಪೀಡಿಸುತ್ತಿವೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.
ಕ್ಲಿಕ್ ಮಾಡಿ ಓದಿ: Adumalleshwara Zoo: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ
ಉಪ್ಪಾರ ಸಮಾಜದ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಸಿದ್ದೇಶ್ವರ ಮಾತನಾಡಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿರುವ ಧನಂಜಯ ಹಂಪಯ್ಯನ ಮಾಳಿಗೆ ಜಿಲ್ಲೆಯ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಸರ್ಕಾರದಿಂದ ಸಿಗಬೇಕಾದ ಸೌಲತ್ತುಗಳನ್ನು ಕೊಡಿಸುವತ್ತ ಗಮನ ಹರಿಸಬೇಕು.
ಸಕಾಲಕ್ಕೆ ಮಳೆಯಿಲ್ಲದೆ ರೈತರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಪರಿಕರಗಳು ಸುಲಭವಾಗಿ ಕೈಗೆ ಸಿಗುವಂತಾಗಬೇಕೆಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಅವರು, ಹೆಗಲಿಗೆ ಹಸಿರು ಶಾಲು ಹಾಕಿಕೊಂಡು 24 ವರ್ಷವಾಯಿತು. ಈಗ ಜವಾಬ್ದಾರಿ ಜಾಸ್ತಿಯಾಗಿದೆ. ಜಿಲ್ಲೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆಯಿದ್ದಾಗ ನಾನು ಹೋರಾಟಕ್ಕಿಳಿದವನು. ಇಲ್ಲಿಯತನಕ ನೂರಾರು ಹೋರಾಟಗಳನ್ನು ಮಾಡಿದ್ದೇನೆ. ಚುನಾವಣೆಯಲ್ಲಿ ಹೆಂಡ ಖಂಡಕ್ಕೆ ಬಲಿಯಾಗಿ ಅಮೂಲ್ಯವಾದ ಮತಗಳನ್ನು ಮಾರಿಕೊಳ್ಳಬೇಡಿ. ರೈತರ ಕಷ್ಟ-ಸುಖಗಳನ್ನು ಆಲಿಸುವಂತ ಯೋಗ್ಯರಿಗೆ ಮತ ನೀಡಿ ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ಕ್ಲಿಕ್ ಮಾಡಿ ಓದಿ: Chitradurga fort: ಕೋಟೆಯ ಒನಕೆ ಓಬವ್ವನ ಕಿಂಡಿಯಲ್ಲಿ ಕುಸಿದು ಬಿದ್ದ ವ್ಯಕ್ತಿ | ಸಕಾಲಕ್ಕೆ ಹೊತ್ತು ತಂದು ಆಸ್ಪತ್ರೆ ಸೇರಿಸಿ ರಕ್ಷಿಸಿದ ಪ್ರವಾಸಿ ಮಿತ್ರರು
ಇಲ್ಲಿಯತನಕ ಯಾವುದೆ ಕಪ್ಪುಚುಕ್ಕೆಯಿಲ್ಲದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಸದಾ ರೈತರ ಪರವಾಗಿರುತ್ತೇನೆಂದು ಭರವಸೆ ನೀಡಿದರು.
ಈ ವೇಳೆ ಲೇಖಕ ಹೆಚ್.ಆನಂದ್‍ಕುಮಾರ್, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ, ದಲಿತ ಮುಖಂಡ ಬಿ.ರಾಜಪ್ಪ, ಉಪನ್ಯಾಸಕ ಬಸವರಾಜ್ ಬೆಳಗಟ್ಟ, ಗುರುಮೂರ್ತಿ, ದಾಳಿಂಬೆ ಈಶ್ವರಪ್ಪ, ಗಂಗಣ್ಣ, ನಿವೃತ್ತ ಉಪನ್ಯಾಸಕ ನಾಗರಾಜ್, ರಮೇಶ್, ಕೆಂಚವೀರಪ್ಪ, ಬಸಣ್ಣ, ಗೋವಿಂದಸ್ವಾಮಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
