CHITRADURGA NEWS | 21 JANUARY 2026
ಹೊಸದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಉದ್ದಾರಕ್ಕಾಗಿ ಮತ್ತು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಬ್ಯಾಂಕುಗಳ ಸೌಲಭ್ಯವನ್ನು ಪ್ರತಿಯೊಂದು ಹಳ್ಳಿಯಲ್ಲಿ ಕೊಟ್ಟು ಜನರನ್ನು ಸ್ಥಿತಿ ವಂತರನ್ನಾಗಿ ಮಾಡುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಜೊತೆ ZP-TP ಚುನಾವಣೆ | ಸರ್ಕಾರದ ಚಿಂತನೆ
ಹೊಸದುರ್ಗ ತಾಲೂಕಿನ ಹಾಲು ರಾಮೇಶ್ವರ ಯೋಜನಾ ಕಚೇರಿಯ ಮಾಡದ್ಕೆರೆ ವಲಯದ ಮಾದಕೆರೆಯಲ್ಲಿ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಲಕ್ಷ್ಮಿ ಪೂಜೆ ಮತ್ತು ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ,
ನಮ್ಮ ಸೇವೆಯನ್ನು ಮಾಡಲು ಕಾರ್ಯಕರ್ತರು ಬೇರೆ ಬೇರೆ ಜಿಲ್ಲೆಯಿಂದ ಬಂದಿದ್ದಾರೆ, ಅವರಿಗೆ ಗೌರವವನ್ನು ಕೊಡಬೇಕು ಎಂದು ನೆರೆದಿರುವ ಜನರಿಗೆ ತಿಳಿಸಿದರು.
ಧರ್ಮಸ್ಥಳದ ಕಾರ್ಯಕ್ರಮವು ಒಂದು ಸರ್ಕಾರ ಮಾಡಲು ಆಗದಿರುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಡೆ ಅವರು ತಮ್ಮ ಕಾರ್ಯಕರ್ತರ ಪಡೆಯೊಂದಿಗೆ ಮಾಡಿಸುತ್ತಿದ್ದಾರೆ ಇದನ್ನು ಎಲ್ಲರೂ ಕೂಡ ಒಳ್ಳೆಯ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ನೀವು ಅಭಿವೃದ್ಧಿಯನ್ನು ಹೊಂದಬೇಕೆಂದು ತಿಳಿಸಿದರು.
ಇದನ್ನೂ ಓದಿ: ನವೋದಯ ವಿದ್ಯಾಲಯ | ಫೆಬ್ರವರಿ 07ಕ್ಕೆ ಪ್ರವೇಶ ಪರೀಕ್ಷೆ
ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು.
ಪ್ರಾದೇಶಿಕ ಕಚೇರಿ ಚಿತ್ರದುರ್ಗ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗರಾಜ್ ಕುಲಾಲ್, ಮಾದಕೆರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಈರಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಚಂದ್ರಶೇಖರ್, ವಲಯದ ಮೇಲ್ವಿಚಾರಕರಾದ ಶ್ರೀ ಚಂದ್ರಗೌಡ, ಸೇವಾ ಪ್ರತಿನಿಧಿಗಳಾದ ಸಚಿನ್, ದೀಪ, ಕರಿಯಮ್ಮ, ಕಮಲಮ್ಮ ಕಾವ್ಯ ಹಾಗೂ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
