
CHITRADURGA NEWS |11 AUGUST 2025
ಹೊಸದುರ್ಗ: ಹಿಂದುಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ ಸ್ಥಗಿತಗೊಳ್ಳಬೇಕು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮಕ್ಕಳ ಕಲಿಕಾ ಸಮಸ್ಯೆ ಗುರುತಿಸಿ | ಬಿಓ ಸೈಯದ್ ಮೋಸಿನ್

ಪಟ್ಟಣದಲ್ಲಿ ಸೋಮವಾರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ಮಾತನಾಡಿದ ಅವರು, ಎಸ್ಐಟಿ ನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎತ್ತಾಗುವಂತಿದೆ. ಅಸಮರ್ಪಕವಾದ ತನಿಕೆಯನ್ನ ಕೂಡಲೇ ಸ್ಥಗಿತಗೊಳಿಸಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪಿ.ಎಫ್.ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವ ತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋ ವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆ ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು.
ಇದನ್ನೂ ಓದಿ: ಜೆ.ಪಿ.ನಗರ ರೋಟರಿಯಿಂದ ಶಾಲೆಗಳಿಗೆ ಸೌಲಭ್ಯ |ಸ್ಮಾರ್ಟ್ ಟಿವಿ, ಡೆಸ್ಕ್, ಆರ್ ಓ ಕೊಡುಗೆ
ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗದಿದ್ದರೆ ಹೊಸದುರ್ಗದಿಂದ ಧರ್ಮಸ್ಥಳಕ್ಕೆ ಅಸಂಖ್ಯಾತ ಭಕ್ತರೊಂದಿಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
