
CHITRADURGA NEWS | 30 OCTOBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಆರ್‍ಎಸ್‍ಎಸ್ ಪಥ ಸಂಚಲನ ನಿಷೇಧಿಸಲು ಕಾಂಗ್ರೆಸ್ ಸರ್ಕಾರ ಹೊರಟಿದ್ದು, ಧಾರವಾಡ ಹೈಕೋರ್ಟ್ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ತಿಳಿಸಿದರು.
ಇದನ್ನೂ ಓದಿ: ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ವಿನಯ್ ತೊಡರನಾಳು ಅವಿರೋಧ ಆಯ್ಕೆ
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ದೇಶಭಕ್ತ ಸಂಘಟನೆ ಆರ್‍ಎಸ್‍ಎಸ್ ಚಟುವಟಿಕೆಗಳನ್ನು ಬ್ಯಾನ್ ಮಾಡಿ ನಿಲ್ಲಿಸುವ ದೃಷ್ಟಿಯಿಂದ ಸರ್ಕಾರ ಆದೇಶ ಹೊರಡಿಸಿತ್ತ. ಇದೀಗ ಧಾರವಾಡ ಹೈಕೋರ್ಟ್ ಪೀಠವು ಇವರ ಆದೇಶಕ್ಕೆ ತಡೆ ನೀಡಿದ್ದು ಇದೀಗ ಸರ್ಕಾರ ಮುಜುಗರಕ್ಕೆ ಒಳಗಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೀಗ ನೂರು ವರ್ಷದ ಇತಿಹಾಸ ಹೊಂದಿರುವ ಸಂಘಟನೆ ಇದು ಭಾರತ ದೇಶಾದ್ಯಂತ ಜಿಲ್ಲೆ ಜಿಲ್ಲೆಗಳಲ್ಲಿ ಶಾಂತಯುತವಾಗಿ ಸಂಚಲನವನ್ನು ಮಾಡುತ್ತಾ ಬಂದಿರುತ್ತದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಓಲೈಕೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಡಿಜೆಹಳ್ಳಿ, ಕೆಜೆಹಳ್ಳಿ, ಮೈಸೂರು, ಶಿವಮೊಗ್ಗ ಹಾಗೂ ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗಳೇ ಇದಕ್ಕೆ ಸಾಕ್ಷಿ. ಇಂತಹವರ ಪ್ರಕರಣಗಳನ್ನು ಹಿಂದಕ್ಕೆ ಪಡೆದು ಅವರಿಗೆ ಬೆಂಬಲಿಸುವುದು ಸರ್ಕಾರದ ಕೆಲಸವಾಗಿದೆ. ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ಕಚೇರಿಗೆ ವೈದ್ಯಕೀಯ ಕಾಲೇಜು ಸ್ಥಳಾಂತರ | ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಮ್ಮತಿ
ರಾಜ್ಯ ಸರ್ಕಾರ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಹಚ್ಚುವುದು ಬಿಡಲಿ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಆರ್‍ಎಸ್‍ಎಸ್ ದೇಶಭಕ್ತ ಸಂಘಟನೆಯನ್ನು ಚಟುವಟಿಕೆಗಳನ್ನು ನಿಷೇಧಿಸಲಿಕ್ಕೆ ಹೊರಟರೆ ಪರಿಣಾಮ ಏನಾಗಬಹುದು ಎಂದು ಇನ್ನಾದರೂ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
