CHITRADURGA NEWS | 26 JANUARY 2025
ಚಿತ್ರದುರ್ಗ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಗೌರವ ಅಭಿಯಾನ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರ ನಿವಾಸದಲ್ಲಿ ಭಾನುವಾರ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಹ ಪಂಕ್ತಿ ಭೋಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Also Read: ಗಣರಾಜ್ಯೋತ್ಸವ ಸಂಭ್ರಮ | ಮೇಟಿಕುರ್ಕೆ ಬಳಿ ಕೈಗಾರಿಕಾ ಕಾರಿಡಾರ್ | ಸಚಿವ ಡಿ.ಸುಧಾಕರ್
ಸಂಸದ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 12ನೇ ಶತಮಾನದ ಬಸವಣ್ಣನವರ ತತ್ವ ಸಿದ್ದಾಂತಗಳ ಮೇಲೆ ಆಡಳಿತ ನಡೆಸುತ್ತಿರುವ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಪೌರ ಕಾರ್ಮಿಕರ ಪಾದ ತೊಳೆದು, ಯಾರು ಮೇಲು, ಕೀಳಲ್ಲ ಎನ್ನುವ ಸಂದೇಶವನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷಗಳ ನಂತರ ದೇಶದಲ್ಲಿ ಭೀಮ ಸಂಗಮ ನಡೆಯುತ್ತಿದೆ. ಸಂವಿಧಾನಕ್ಕೆ ನಿಜವಾದ ಗೌರವ ಕೊಟ್ಟವರು ಪ್ರಧಾನಿ ನರೇಂದ್ರ ಮೋದಿ ಅವರು, ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಡಿ ದೇಶದ ಪ್ರತಿಯೊಬ್ಬರಿಗೂ ಸಮಾನತೆ ನೀಡಿದ ಫಲವಾಗಿ ಚಹ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಜಾತಿ ಬೇಧ, ಮೇಲು-ಕೀಳೆಂಬ ತಾರತಮ್ಯ ನಿವಾರಣೆಯಾಗಬೇಕೆಂಬ ಉದ್ದೇಶದಿಂದ ದೇಶಾದ್ಯಂತ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುತ್ತಿದೆ.
ರಾಜ್ಯ ಸರ್ಕಾರ ಐದು ಉಚಿತ ಗ್ಯಾರೆಂಟಿಗಳನ್ನು ನೀಡಿ ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ. ಇಂತಹ ಬಿಟ್ಟಿ ಭಾಗ್ಯಗಳನ್ನು ಜನ ಎಲ್ಲಿಯವರೆಗೂ ತಿರಸ್ಕರಿಸುವುದಿಲ್ಲವೋ ಅಲ್ಲಿಯತನಕ ಉದ್ದಾರ ಸಾಧ್ಯವಿಲ್ಲ. ಬಿ.ಎಸ್.ಯಡಿಯೂರಪ್ಪ, ಬಸವರಾಜ್‌ಬೊಮ್ಮಾಯಿ ಇವರುಗಳು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾಗ 24 ಸಾವಿರ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿ ಜೀವನ ಭದ್ರತೆ ಕೊಟ್ಟಿದ್ದನ್ನು ಸಂಸದ ಗೋವಿಂದ ಕಾರಜೋಳ ಸ್ಮರಿಸಿದರು.
Also Read: ರ್ಯಾಂಕ್ ಪಡೆದ ಎಸ್‍ಜೆಎಂ ಕಾಲೇಜು ವಿದ್ಯಾರ್ಥಿನಿಯರು
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಭಾರತಕ್ಕೆ ಭದ್ರವಾದ ಸಂವಿಧಾನವನ್ನು ಕೊಟ್ಟಿರುವ ಡಾ.ಬಿ.ಆರ್.ಅಂಬೇಡ್ಕರ್‌ರವರನ್ನು ಗೌರವಿಸಬೇಕೆಂಬ ಉದ್ದೇಶದಿಂದ ದೇಶದ ಪ್ರಧಾನಿ ನರೇಂದ್ರಮೋದಿರವರು ಭೀಮ ಸಂಗಮದ ಮೂಲಕ ಪೌರ ಕಾರ್ಮಿಕರ ಜೊತೆ ಸಹ ಪಂಕ್ತಿ ಭೋಜನ ಸವಿಯುವಂತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಮ್ಮ ನಿವಾಸದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಅವರೊಂದಿಗೆ ಊಟ ಮಾಡುತ್ತಿದ್ದೇವೆ.
ಮುಂದಿನ ದಿನಗಳಲ್ಲಿ ನಗರಸಭೆ, ನಗರಾಭಿವೃದ್ದಿ ಪ್ರಾಧಿಕಾರದಿಂದ ಪೌರ ಕಾರ್ಮಿಕರಿಗೆ ನಿವೇಶನಗಳನ್ನು ಕೊಡಿಸುವುದಾಗಿ ಕೆ.ಎಸ್.ನವೀನ್ ಭರವಸೆ ನೀಡಿ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಗಳು ಸಫಲವಾಗಬೇಕಾದರೆ ಇಂತಹ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯ ಎಂದರು.
ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಮೊಳಕಾಲ್ಮುರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿದರು.
Also Read: ಇಂದಿನ ಯುವ ಪೀಳಿಗೆ ಕಾಡುತ್ತಿದೆ ದಶಕಗಳ ಹಿಂದಿನ ಭ್ರೂಣಹತ್ಯೆ ಶಾಪ | ಶಾಂತವೀರ ಶ್ರೀ
ಬಿಜೆಪಿ ಯುವ ಮುಖಂಡ ಜಿ.ಎಂ.ಅನಿತ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್‌ಬೇದ್ರೆ, ಹನುಮಂತೆಗೌಡ, ಕೆ.ಟಿ.ಕುಮಾರಸ್ವಾಮಿ, ಜಯಪಾಲಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮೋಹನ್, ಪೌರ ಕಾರ್ಮಿಕ ಮೋಹನ್ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
