CHITRADURGA NEWS | 23 MAY 2026
ಬೇಸಿಗೆಯಲ್ಲಿ ವಾತಾವರಣ ತುಂಬಾ ಬಿಸಿಯಾಗಿರುತ್ತದೆ. ಇದರ ಪರಿಣಾಮ ನಮ್ಮ ದೇಹದ ಮೇಲೂ ಸಹ ಆಗುತ್ತದೆ. ಹಾಗಾಗಿ ನಾವು ಆಗಾಗ ಅನಾರೋಗ್ಯಕ್ಕೊಳಗಾಗುತ್ತೇವೆ. ಅದಕ್ಕಾಗಿ ಶಾಖದ ಹೊಡೆತವನ್ನು ತಪ್ಪಿಸಲು ವೈದ್ಯರು ಅಥವಾ ಆಯುರ್ವೇದ ತಜ್ಞರು ಈರುಳ್ಳಿ ತಿನ್ನಲು ಸಲಹೆ ನೀಡುತ್ತಾರೆ. ಈಕೆಂದರೆ ಈರುಳ್ಳಿ ದೇಹದ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಜೇನುತುಪ್ಪದಲ್ಲಿ ಅದ್ದಿದ ಈರುಳ್ಳಿ ತಿನ್ನುವುದರಿಂದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಹಲವರಿಗೆ ತಿಳಿದಿಲ್ಲ. ಹಾಗಾದ್ರೆ ಈರುಳ್ಳಿಯನ್ನು ಮಾತ್ರ ತಿನ್ನುವ ಬದಲು ಜೇನುತುಪ್ಪದಲ್ಲಿ ಅದ್ದಿ ತಿನ್ನುವುದರಿಂದ ನಿಮ್ಮ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ.
ರಕ್ತವನ್ನು ಶುದ್ಧೀಕರಿಸುತ್ತದೆ
ಜೇನುತುಪ್ಪದಲ್ಲಿ ಅದ್ದಿದ ಈರುಳ್ಳಿ ತಿನ್ನುವುದರಿಂದ ರಕ್ತ ಶುದ್ಧವಾಗುತ್ತದೆ. ಈರುಳ್ಳಿ ಮತ್ತು ಜೇನುತುಪ್ಪ ಎರಡೂ ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿವೆ. ಈರುಳ್ಳಿ ರಕ್ತದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಹೀಗಾಗಿ ಅದನ್ನು ಶುದ್ಧೀಕರಿಸುತ್ತದೆ.
ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ
ಜೇನುತುಪ್ಪದಲ್ಲಿ ನೆನೆಸಿದ ಈರುಳ್ಳಿ ತಿನ್ನುವುದರಿಂದ ನಿಮ್ಮ ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ. ಹಾಗೂ ಜೀರ್ಣಾಂಗ ವ್ಯವಸ್ಥೆಯು ಹೆಚ್ಚು ಸಕ್ರಿಯವಾಗುತ್ತದೆ. ಈರುಳ್ಳಿ ಮತ್ತು ಜೇನುತುಪ್ಪ ಎರಡೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದ್ದು ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿಯಾಗಿದೆ. ಅವುಗಳನ್ನು ಸೇವಿಸುವುದರಿಂದ ನಿಮ್ಮ ಜೀರ್ಣಕ್ರಿಯೆಯೂ ಸುಧಾರಿಸುತ್ತದೆ.
ದೇಹದ ಊತವನ್ನು ಕಡಿಮೆ ಮಾಡುತ್ತದೆ
ಈರುಳ್ಳಿ ಉರಿಯೂತ ನಿವಾರಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದು ಶೀತ ಮತ್ತು ಗಂಟಲು ನೋಯುವಂತಹ ಪರಿಸ್ಥಿತಿಗಳಿಗೆ ಸಂಬಂಧಿಸಿದ ಉರಿಯೂತವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿದೆ. ಜೇನುತುಪ್ಪವು ಶಮನಕಾರಿ ಮತ್ತು ಉರಿಯೂತ ನಿವಾರಕ ಗುಣಲಕ್ಷಣಗಳನ್ನು ಸಹ ಹೊಂದಿದೆ. ಇದು ಕಿರಿಕಿರಿಯುಂಟುಮಾಡುವ ಅಂಗಾಂಶಗಳನ್ನು ಶಮನಗೊಳಿಸುವಲ್ಲಿ ಪರಿಣಾಮಕಾರಿಯಾಗಿದೆ. ಆದ್ದರಿಂದ, ಈ ಸಂಯೋಜನೆಯು ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ತುಂಬಾ ಸಹಾಯಕವಾಗಬಹುದು.
ನಿದ್ರಾಹೀನತೆಯನ್ನು ನಿವಾರಿಸುತ್ತದೆ
ಜೇನುತುಪ್ಪದಲ್ಲಿ ನೆನೆಸಿದ ಈರುಳ್ಳಿ ತಿನ್ನುವುದರಿಂದ ನಿದ್ರಾಹೀನತೆ ನಿವಾರಣೆಯಾಗುತ್ತದೆ. ಈರುಳ್ಳಿಯಲ್ಲಿರುವ ನೈಸರ್ಗಿಕ ಸಂಯುಕ್ತಗಳು ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಇದರಿಂದಾಗಿ ನೀವು ಚೆನ್ನಾಗಿ ಮತ್ತು ಆಳವಾಗಿ ನಿದ್ರೆ ಮಾಡಲು ಅನುವು ಮಾಡಿಕೊಡುತ್ತದೆ.
ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಈರುಳ್ಳಿ ಮತ್ತು ಜೇನುತುಪ್ಪ ಎರಡರಲ್ಲೂ ಹೆಚ್ಚಿನ ಪ್ರಮಾಣದ ಆ್ಯಂಟಿ ಆಕ್ಸಿಡೆಂಟ್‍ಗಳು ಇರುತ್ತವೆ. ಇದು ನಿಮ್ಮ ದುರ್ಬಲಗೊಂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿದೆ. ಆ್ಯಂಟಿ ಆಕ್ಸಿಡೆಂಟ್‍ಗಳು ದೇಹವು ಅನಾರೋಗ್ಯದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ಸೋಂಕುಗಳನ್ನು ನಿವಾರಿಸುತ್ತದೆ.
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯಕವಾಗಿದೆ
ಈರುಳ್ಳಿ ರಸವು ಚಯಾಪಚಯ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುವ ಸಂಯುಕ್ತಗಳನ್ನು ಹೊಂದಿರುತ್ತದೆ. ಇದನ್ನು ಸೇವಿಸುವುದರಿಂದ ದೇಹದ ತೂಕವನ್ನು ನಿರ್ವಹಿಸಲು ಸಹಾಯವಾಗುತ್ತದೆ. ಜೇನುತುಪ್ಪವನ್ನು ಸಂಸ್ಕರಿಸಿದ ಸಕ್ಕರೆಗಿಂತ ಆರೋಗ್ಯಕರ ಆಯ್ಕೆಯೆಂದು ಪರಿಗಣಿಸಲಾಗುತ್ತದೆ. ಇದು ಹೆಚ್ಚುವರಿ ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೊಬ್ಬಿನ ನಷ್ಟಕ್ಕೆ ಮತ್ತಷ್ಟು ಸಹಾಯ ಮಾಡುತ್ತದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
