
CHITRADURGA NEWS | 12 MARCH 2026
ಚಿತ್ರದುರ್ಗ: ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕೆಯ ಅಗತ್ಯ ಸಿದ್ಧತಾ ಕ್ರಮಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಆಕಾಶವಾಣಿ ಚಿತ್ರದುರ್ಗ ಎಫ್.ಎಂ. ಕೇಂದ್ರದ ವತಿಯಿಂದ ಇದೇ ಮಾರ್ಚ್ 12ರಂದು ನೇರಫೋನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್.ಆಂಜನೇಯ ಪತ್ರ | ಪತ್ರದ ಸಾರಾಂಶ ಇಲ್ಲಿದೆ
ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆ 5 ನಿಮಿಷದಿಂದ 11 ಗಂಟೆ 5 ನಿಮಿಷದವರೆಗೆ ಹಮ್ಮಿಕೊಂಡಿರುವ ನೇರಫೋನ್ ಇನ್ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಶಿಕ್ಷಣಾಧಿಕಾರಿ ಮೊಹಮ್ಮದ್ ಇನಾಯತ್ ಉಲ್ಲಾ, ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್ ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು, ಪೋಷಕರು ಸಾರ್ವಜನಿಕರು ದೂರವಾಣಿ ಸಂಖ್ಯೆ 9448640273, 9141970272, 08194-295649 ಗೆ ಕರೆ ಮಾಡಬಹುದು.
ನೇರ ಸಂವಾದ:
ಆಕಾಶವಾಣಿ ಚಿತ್ರದುರ್ಗ ಎಫ್.ಎಂ ಕೇಂದ್ರದಿಂದ ಮಾರ್ಚ್ 12ರಂದು ರಾತ್ರಿ 9.15ಕ್ಕೆ “ಸಾಹಿತ್ಯ ಸಪ್ತ ಸ್ವರ ನೇರ ಸಂವಾದ” ಕಾರ್ಯಕ್ರಮದಲ್ಲಿ ಚಿತ್ರದುರ್ಗ ಬುಡಕಟ್ಟು ಸಮುದಾಯಗಳ ಸಾಂಸ್ಕøತಿಕ ಅನನ್ಯತೆ” ಕುರಿತು ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜಿ.ಡಿ.ಚಿತ್ತಣ್ಣ ಸೀಗೆಹಟ್ಟಿ ಅವರೊಂದಿಗೆ ಸಂದರ್ಶನ ನಡೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸಿಲಿಂಡರ್ ಕೊರತೆ ಇಲ್ಲಾ | ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ
ಡಾ.ನವೀನ್ ಮಸ್ಕಲ್ ಸಂದರ್ಶನ ನಡೆಸುವರು. ಈ ಕಾರ್ಯಕ್ರಮವನ್ನು ಪ್ರಸಾರದ ಸಮಯದಲ್ಲಿ ಜಗತ್ತಿನಾದ್ಯಂತ ಕೇಳಲು News on Air download ಮಾಡಿ ಕೇಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
