CHITRADURGA NEWS | 17 NOVEMBER 2024
ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ(interview) ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ನಗರಸಭೆ ಜಾಗಗಳನ್ನು ರಕ್ಷಿಸಲು ವಿಶೇಷ ಅಭಿಯಾನ | ಶ್ರೀನಿವಾಸ್
ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಕ್ಲಿಕ್ ಮಾಡಿ ಓದಿ: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number