ಮುಖ್ಯ ಸುದ್ದಿ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ನೇರ ನೇಮಕಾತಿ ಸಂದರ್ಶನ ಜ.10ಕ್ಕೆ
CHITRADURGA NEWS | 07 JANUARY 2025
ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಜನವರಿ 10ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಮಾದಾರ ಚನ್ನಯ್ಯ ಶ್ರೀ ಬಗ್ಗೆ ಅವಹೇಳನಕಾರಿ ಪೋಸ್ಟ್ | ದೂರು ದಾಖಲು
ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿಗೆ ಸಾಣೇಹಳ್ಳಿ ಶ್ರೀ ಆಯ್ಕೆ