
CHITRADURG A NEWS | 13 MAY 2025
ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.16ರಂದು ಬೆಳಿಗ್ಗೆ 10 ರಿಂದ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
Also Read: ಅಡಿಕೆ ಧಾರಣೆ | 12 ಮೇ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ಫೋಟೋಸ್, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
