
CHITRADURGA NEWS | 19 AUGUST 2024
ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆಮಾಡಿಕೊಳ್ಳಲಿವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋ ತರಬೇಕು.
ಕ್ಲಿಕ್ ಮಾಡಿ ಓದಿ: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು
ಹೆಚ್ಚಿನ ಮಾಹಿತಿಗೆ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
