
CHITRADURGA NEWS | 28 FEBRUARY 2026
ಚಿತ್ರದುರ್ಗ: ಕಾರ್ಮಿಕ ಸಚಿವ ಸಂತೋಷ್ ಲಾಡ್‍ರವರ ಹುಟ್ಟುಹಬ್ಬದ ಅಂಗವಾಗಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಪತ್ರಕರ್ತರ ಭವನದಲ್ಲಿ ಆಪತ್ ರಕ್ಷಕ ದಿನಾಚರಣೆ ಹಾಗೂ ಸಾಧಕರ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ತೋಟಗಾರಿಕೆ ಇಲಾಖೆ ಬಳಿ ಹೊಸ ಡಿಸಿ ಕಚೇರಿಗೆ ಅನುಮತಿ | 6.30 ಎಕರೆಯಲ್ಲಿ ಜಿಲ್ಲಾಡಳಿತ ಭವನ
ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರಾದ ಡಾ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ, ವಾಹನ ಚಾಲನೆ ಮಾಡುವಾಗ ಎಚ್ಚರ ತಪ್ಪಿದರೆ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುವುದುಂಟು. ಅರಿವಿನ ಆಂದೋಲನವಾಗಬೇಕು ಎಂದು ತಿಳಿಸಿದರು.
ಒತ್ತಡದಲ್ಲಿ ಎಲ್ಲರೂ ಬದುಕುತ್ತಿರುವುದರಿಂದ ಜೀವನಕ್ಕೆ ಬೇಕಾದ ಅಂಶಗಳನ್ನು ಮರೆಯುತ್ತಿದ್ದಾರೆ. ಅಕ್ಷರ, ಅನ್ನ, ಆರೋಗ್ಯ ಇವುಗಳು ಸೇವೆಗಾಗಿ ಹುಟ್ಟಿಕೊಂಡಿವೆ. 21 ನೇ ಶತಮಾನ ಬದಲಾಗಿರುವುದರಿಂದ ಮನುಷ್ಯನ ಜೀವನ ಶೈಲಿಯು ಬದಲಾವಣೆಗೆ ತಕ್ಕಂತೆ ಹೊಂದಿಕೊಂಡಿದೆ.
ಅರಿವಿನ ಕೊರತೆಯಿರುವುದರಿಂದ ಅಪಘಾತಗಳು ದಿನನಿತ್ಯವೂ ಸಂಭವಿಸುತ್ತಿವೆ. ಕಾರ್ಮಿಕ ಸಚಿವ ಸಂತೋಷ್‍ಲಾಡ್‍ರವರು ಸಂಕಷ್ಟದಲ್ಲಿರುವವರ ನೆರವಿಗೆ ಸದಾ ಮುಂದಿರುತ್ತಾರೆ. ಅವಸರದ ವೇಗ ಮುಖ್ಯವಲ್ಲವೆಂದು ಎಲ್ಲರೂ ಆತ್ಮಾವಲೋಕನ ಮಾಡಿಕೊಂಡಾಗ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 27 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್
ಡಾ.ಸೌಮ್ಯ ಸಂದೀಪ್ ಮಾತನಾಡಿ, ಸಂತೋಷ್‍ಲಾಡ್‍ರವರ ಹುಟ್ಟುಹಬ್ಬವನ್ನು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‍ನವರು ಆಪತ್ ರಕ್ಷಕ್ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಸಂತೋಷದ ಸಂಗತಿ. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದಿರಬೇಕು.
ಬೇರೆಯವರಿಗೆ ಸಮಯ ಮೀಸಲಿಡುವವರು ತುಂಬಾ ವಿರಳವಾಗಿರುವ ಇಂದಿನ ಕಾಲದಲ್ಲಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‍ನವರು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆಯುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸೌಮ್ಯ ಮಂಜುನಾಥಸ್ವಾಮಿ ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗಿರುವವರನ್ನು ಗುರುತಿಸಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸನ್ಮಾನಿಸಿ ಬೆನ್ನು ತಟ್ಟುವ ಕೆಲಸ ಮಾಡುತ್ತಿದೆ. ಕಷ್ಟದಲ್ಲಿರುವವರ ನೆರವಿಗೆ ಧಾವಿಸುವ ಸಚಿವ ಸಂತೋಷ್‍ಲಾಡ್‍ರವರ ಮಾನವೀಯ ಗುಣ ಅನನ್ಯವಾದುದು. ಅವರ ಹುಟ್ಟಹಬ್ಬವನ್ನು ರಾಜ್ಯದ 20 ಜಿಲ್ಲೆಗಳಲ್ಲಿ ಆಪತ್ ರಕ್ಷಕ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಸಂಘಟನೆ ಒಬ್ಬರಿಂದ ಆಗುವುದಲ್ಲ. ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: NIELIT ನೇಮಕಾತಿ | ಮಾರ್ಚ್ 11 ರಂದು ಸಂದರ್ಶನ
ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‍ನ ರಾಜ್ಯಾಧ್ಯಕ್ಷ ಡಿ.ರಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ರಂಗಗಳಲ್ಲಿ ಸಾಧನೆಗೈದಿರುವ 25 ಸಾಧಕರಿಗೆ ಸನ್ಮಾನಿಸಲಾಯಿತು.
ಮಹಿಳಾ ಸಮಾಜದ ಉಪಾಧ್ಯಕ್ಷೆ ಮೋಕ್ಷರುದ್ರಸ್ವಾಮಿ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ದೃಶ್ಯ ಮಾಧ್ಯಮ ವರದಿಗಾರ ಸಿದ್ದರಾಜು, ಅಹೋಬಲ ಟಿ.ವಿ.ಎಸ್ ಮಾಲೀಕರಾದ ಅರುಣ್‍ಕುಮಾರ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

