ಮುಖ್ಯ ಸುದ್ದಿ
ಮಾರ್ಚ್ 06 ರಂದು ದಿಶಾ ಸಭೆ
CHITRADURGA NEWS | 29 FEBRUARY 2024
ಚಿತ್ರದುರ್ಗ: ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ದಿಶಾ ಸಭೆ ಮಾರ್ಚ್ 06 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಇದನ್ನೂ ಓದಿ: ಚಿಣ್ಣರ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಯಿತು ಮಕ್ಕಳ ಹಬ್ಬ
ಸಭೆಯಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ನವೆಂಬರ್-2023 ರಿಂದ ಜನವರಿ-2024 ರವರೆಗಿನ ಅವಧಿಯ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.