
CHITRADURGA NEWS | 08 MAY 2024
ಚಿತ್ರದುರ್ಗ: ಅಶ್ಲೀಲ ವಿಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕುತ್ತಿರುವ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಜಿಲ್ಲಾ ಜಾತ್ಯಾತೀತ ಜನತಾದಳದಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಮಂಗಳವಾರ ಸಂಜೆ ಎಲ್ಲೆಲ್ಲಿ ಎಷ್ಟು ಮಳೆ ಸುರಿದಿದೆ?
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ, ಪೆನ್ ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನಿಗೆ ಶಿಕ್ಷೆ ನೀಡಲು ಕಾನೂನಿದೆ.
ಅದನ್ನು ಬಿಟ್ಟು ಸಂತ್ರಸ್ಥ ಮಹಿಳೆಯರ ಮಾನ ಹರಾಜು ಹಾಕುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ತಕ್ಕ ಶಿಕ್ಷೆ ವಿಧಿಸಬೇಕು. ನಾಲ್ಕು ಗೋಡೆಗಳ ನಡುವೆ ನಡೆದಿರುವ ಕೃತ್ಯವನ್ನು ಇಡಿ ದೇಶವೇ ನೋಡುವಂತೆ ಮಾಡಿರುವುದು ಅತ್ಯಂತ ನೀಚ ಕೃತ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ, ಕೋರ್ ಕಮಿಟಿ ಈಗಾಗಲೆ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಉಚ್ಚಾಟಿಸಿದೆ. ಹೆಣ್ಣು ಮಕ್ಕಳ ಮಾನ ಸಂರಕ್ಷಣೆ ಮಾಡಬೇಕಾಗಿರುವ ಕಾಂಗ್ರೆಸ್ ಸರ್ಕಾರವೇ ಬೀದಿ ಪಾಲು ಮಾಡಿದೆ.
ಇದನ್ನೂ ಓದಿ: ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮತ್ತೊಮ್ಮೆ ಹರಿಯಲಿದೆ ನೀರು | ಡಿಸಿ ನೇತೃತ್ವದ ಸಭೆಯಲ್ಲಿ ತೀರ್ಮಾನ

ಈ ನೆಲದ ಕಾನೂನನ್ನು ಜೆಡಿಎಸ್ ಗೌರವಿಸುತ್ತದೆ. ಕಾಂಗ್ರೆಸ್ ಕೃಪಾ ಪೋಷಿತ ನಾಟಕ ಮಂಡಳಿ ಸಿಡಿ ಬಿಡುಗಡೆಗೊಳಿಸಿರುವ ಕಳಂಕ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳಿಗೆ ಮೆತ್ತಿಕೊಂಡಿದೆ. ರಾಜಕೀಯ ಲಾಭಕ್ಕಾಗಿ ಮತ್ತೊಬ್ಬರ ಮಾನ ಹರಣವಾಗಬಾರದು. ಮತ ಪಡೆಯುವ ಭ್ರಮೆಯಲ್ಲಿ ಕಾಂಗ್ರೆಸ್ ತೇಲುತ್ತಿರುವುದು ಮೂರ್ಖತನ ಎಂದು ಲೇವಡಿ ಮಾಡಿದರು.
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಎಸ್.ಐ.ಟಿ. ಪಾರದರ್ಶವಾಗಿ ತನಿಖೆ ನಡೆಸುತ್ತಿಲ್ಲದಿರುವುದರಿಂದ ಸಿ.ಬಿ.ಐ.ಗೆ ವಹಿಸಬೇಕು. ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಿರುವುದು ನಮ್ಮ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮುರುಘಾ ಮಠದಲ್ಲಿ ಎಸ್ ಜೆ ಎಂ ವಿದ್ಯಾಪೀಠದ ನೌಕರರ ಸಮಾಲೋಚನ ಸಭೆ
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಇನ್ನು ಯಾರ್ಯಾರ ಸಿಡಿಗಳಿದೆಯೋ ಗೊತ್ತಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಿಡಿ ಬಿಡುಗಡೆಗೊಳಿಸಿ ಹೆಣ್ಣು ಮಕ್ಕಳ ಮಾನ ಬೀದಿಗೆಳೆದಿರುವುದು ಕೀಳುತನ ತೋರಿಸುತ್ತದೆ. ಪ್ರಜ್ವಲ್ ರೇವಣ್ಣನನ್ನು ನಾವುಗಳ್ಯಾರು ಸಮರ್ಥಿಸಿಕೊಳ್ಳುವುದಿಲ್ಲ.
ತಪ್ಪು ಮಾಡಿದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ನನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ತನಿಖೆಯನ್ನು ಎಸ್.ಐ.ಟಿ.ಗೆ ವಹಿಸಿರುವುದರಿಂದ ಸಂತ್ರಸ್ಥರಿಗೆ ನ್ಯಾಯ ಸಿಗುವುದು ಅನುಮಾನ. ಅದಕ್ಕಾಗಿ ಸಿ.ಬಿ.ಐ.ಗೆ ವಹಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ: ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ | ಬೈಕ್ ರ್ಯಾಲಿ
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ರಾಜ್ಯ ಕಾರ್ಯದರ್ಶಿ ಮಠದಟ್ಟಿ ವೀರಣ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಗುರುಸಿದ್ದಪ್ಪ, ರವೀಂದ್ರಪ್ಪ, ಶಂಕರ್ಮೂರ್ತಿ, ಮಂಜುನಾಥ್, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯರುಗಳಾದ ವಿಜಯಕುಮಾರ್, ತಿಪ್ಪೇಸ್ವಾಮಿ, ಅಲ್ಪಸಂಖ್ಯಾತ ಘಟಕದ ಅಬ್ಬು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
