
CHITRADURGA NEWS | 14 FRBRUARY 2025
ಚಿತ್ರದುರ್ಗ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ(Narega) ಕಾರ್ಯ ನಿರ್ವಹಿಸುತ್ತಿದ್ದ ತಾಂತ್ರಿಕ ಸಹಾಯಕ ಆರ್.ಸಂಜಯ್ ಅವರನ್ನು ಕರ್ತವ್ಯ ಲೋಪ ಹಿನ್ನಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ: ಎಮ್ಮೆ ಕಟ್ಟಿಹಾಕಿದ್ದಕ್ಕೆ ಮಚ್ಚಿನಿಂದ ಹಲ್ಲೆ | 10 ವರ್ಷ ಜೈಲು ಶಿಕ್ಷೆ
ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ, ಪ್ರಸ್ತುತ ಚಳ್ಳಕೆರೆ ತಾಲ್ಲೂಕು ತಾಂತ್ರಿಕ ಸಹಾಯಕ ಆರ್.ಸಂಜಯ್, ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಬನಹಳ್ಳಿ ಗ್ರಾಮದ ರಿ.ಸರ್ವೆ ನಂ.27/1ಎ ರ ಜಮೀನಿನಲ್ಲಿ ಪಿಡಿಒ ಮತ್ತು ಜಮೀನು ಮಾಲೀಕರಾದ ಮಂಗಳಮ್ಮ ಕೋಂ ಗುಡ್ಡುಪಾಲಯ್ಯ ಅವರ ಹೆಸರಿನಲ್ಲಿರುವ ಜಮೀನಿನಲ್ಲಿ ವಿರುಪಣ್ಣ ನಾಯಕ ಇವರ ಹೆಸರಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ನಿಯಮಬಾಹಿರವಾಗಿ ಅನುಷ್ಠಾನಗೊಳಿಸಿರುವುದರಿಂದ ಜಿಲ್ಲಾ ಪಂಚಾಯಿತಿ ಓಂಬುಡ್ಸ್ ಪರ್ಸನ್(ombudsman) ತನಿಖೆ ನಡೆಸಿದ ಸಂದರ್ಭದಲ್ಲಿ ಕಂಡುಬಂದಿದ್ದು, ನರೇಗಾ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪವೆಸಗಿದ್ದಾರೆ.
ಇದನ್ನೂ ಓದಿ: PDO ಸೇವೆಯಿಂದ ಅಮಾನತು
ನರೇಗಾ ಯೋಜನೆಯ ಮಾರ್ಗಸೂಚಿ ಉಲ್ಲಂಘನೆ ಮಾಡಿರುವುದರಿಂದ ತಾಂತ್ರಿಕ ಸಹಾಯಕ ಆರ್.ಸಂಜಯ್ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದಿರುವುದರಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
