CHITRADURGA NEWS | 14 FEBRUARY 2026
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ಪಂಪ್‍ಹೌಸ್‍ಗಳಿಗೆ ಬೆಸ್ಕಾಂ ಇಲಾಖೆಯ ನಿರ್ವಹಣೆ ಕಾಮಗಾರಿ ನಡೆಯುವುದರಿಂದ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 13 ಫೆಬ್ರವರಿ | ಯಾವ ಅಡಿಕೆಗೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್ ?
ವಾಣಿವಿಲಾಸ ಸಾಗರದಿಂದ ನಗರಕ್ಕೆ ನೀರು ಪಂಪ್ ಮಾಡುವ ಮಾರ್ಗದಲ್ಲಿ ವಿದ್ಯುತ್ ಲೈನ್‍ಗಳ ದುರಸ್ತಿ ಕಾರ್ಯದಿಂದಾಗಿ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗುತ್ತಿದೆ. ಹಾಗಾಗಿ ವಾಣಿವಿಲಾಸ ಸಾಗರ ವ್ಯವಸ್ಥೆಯಲ್ಲಿ ಹಾಗೂ ಬೇಸಿಗೆ ಕಾಲವಾಗಿರುವುದರಿಂದ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುತ್ತಿರುತ್ತದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸಬೇಕು. ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
