
CHITRADURGA NEWS | 03 December 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಸುಮಾರು 25 ಸಾವಿರಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳಿವೆ, ಎಷ್ಟು ಟ್ರ್ಯಾಕ್ಟರ್‍ಗಳಿಗೆ ರಿಫ್ಲೆಕ್ಟರ್ ಸ್ಟಿಕರ್ ಅಳವಡಿಸಿದ್ದೀರಿ, ಎಂಬುದಾಗಿ ಎಸ್‍ಪಿ ರಂಜಿತ್ ಕುಮಾರ್ ಬಂಡಾರು ಅವರು ಮೋಟಾರು ವಾಹನ ನಿರೀಕ್ಷಕರಿಗೆ ಪ್ರಶ್ನಿಸಿದರು.
ಇದನ್ನೂ ಓದಿ: ಅಪಘಾತ ವಲಯಗಳ ಜಂಟಿ ಸಮೀಕ್ಷೆ ನಡೆಸಿ ವರದಿ ಮಾಡಿ
ಇದಕ್ಕೆ ಉತ್ತಿರಿಸಿದ ಅವರು, ಆರ್‍ಟಿಒ ಕಚೇರಿಗೆ ವಿವಿಧ ಕಾರ್ಯಗಳಿಗೆ ಬಂದಂತಹ 450 ಟ್ರ್ಯಾಕ್ಟರ್‍ಗಳಿಗೆ ಅಳವಡಿಸಿದ್ದೇವೆ ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎಸ್‍ಪಿ ಅವರು, ಕತ್ತಲಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿಗಳು ರಸ್ತೆಗಳಲ್ಲಿ ಹೋಗುತ್ತಿದ್ದರೂ ವಾಹನ ಸವಾರರಿಗೆ ಗೋಚರಿಸುವುದಿಲ್ಲ, ಇತ್ತೀಚೆಗಷ್ಟೇ ಕಾರು ಟ್ರ್ಯಾಕ್ಟರ್ ಅಪಘಾತವಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.
ವಿಶೇಷ ಅಭಿಯಾನ ಮಾಡಿ, ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ರಿಫ್ಲೆಕ್ಟರ್ ಸ್ಟಿಕರ್ ಅಳವಡಿಸುವಂತೆ ಸೂಚನೆ ನೀಡಲಾಗಿತ್ತು, ಆದರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮ ವಹಿಸಿಲ್ಲ ಎಂದು ಎಸ್‍ಪಿ ರಂಜಿತ್ ಕುಮಾರ್ ಬಂಡಾರು ಅಸಮಾಧಾನ ವ್ಯಕ್ತಪಡಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
