
CHITRADURGA NEWS | 28 OCTOBER 2025
ಚಿತ್ರದುರ್ಗ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಒಂದು ದಿನದ ಅಂತರ-ಪೀಳಿಗೆಯ ಬಾಂಧವ್ಯ ಮೇಳವನ್ನು ಇದೇ ಅ.29ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ನವೆಂಬರ್ 12 ರಿಂದ ಚಿತ್ರದುರ್ಗದಲ್ಲಿ ಸ್ವದೇಶಿ ಮೇಳ | ಪೋಸ್ಟರ್ ಬಿಡುಗಡೆ

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಎಸ್.ರಂಗಸ್ವಾಮಿ ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ಉಪವಿಭಾಗಾಧಿಕಾರಿ ಮಹೆಬೂಬ್ ಜೀಲಾನಿ ಖುರೇಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಅಧ್ಯಕ್ಷ ಪ್ರೇಮನಾಥ ಭಾಗವಹಿಸುವರು.
ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ-2007 ಕಾಯ್ದೆ ಕುರಿತು ಸಂಪನ್ಮೂಲ ವ್ಯಕ್ತಿ ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಂ.ಮೂರ್ತಿ ಉಪನ್ಯಾಸ ನೀಡುವರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ಹತ್ತಿ ರೇಟ್ ಎಷ್ಟಿದೆ?
ನಮ್ಮ ಹಿರಿಯರು-ನಮ್ಮ ಆದರ್ಶ ಎಂಬ ವಿಷಯದ ಕುರಿತು ನಿವೃತ್ತ ಉಪನ್ಯಾಸಕರು, ಸಾಹಿತಿ ಸಿ.ಬಿ.ಶೈಲಾ ಜಯಕುಮಾರ್ ಮಾತನಾಡುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
