CHITRADURGA NEWS | 07 AUGUST 2026
ಚಿತ್ರದುರ್ಗ: ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಹಾಗೂ ಶ್ರದ್ಧೆಯನ್ನು ಮೈಗೂಡಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜು ಹೇಳಿದರು.
ಇದನ್ನೂ ಓದಿ: ಆ.8ರಂದು ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಲಿಂ. ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ
ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಡಾ.ಜಿ.ಪರಮೇಶ್ವರ ಅವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಬುದ್ಧನ ಕಂಚಿನ ವಿಗ್ರಹಗಳ ವಿತರಣಾ ಸಮಾರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
‘ನಾನೂ ಕೂಡ ಹಿಂದೆ ವಸತಿ ನಿಲಯದಲ್ಲಿದ್ದುಕೊಂಡೇ ವಿದ್ಯಾಭ್ಯಾಸ ಪೂರೈಸಿದವನು. ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ನಿರಂತರವಾಗಿ ಓದುವುದರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ಇಂದು ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ.
ವಸತಿ ನಿಲಯದಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿನಿಯರು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
ಸರಸ್ವತಿ ಕಾನೂನು ಮಹಾವಿದ್ಯಾಲಯದ ಪ್ರೊ. ನಟರಾಜ್ ಮಾತನಾಡಿ, ಬುದ್ಧನ ಬೋಧನೆಗಳು ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ಮುಖಂಡ ಜಿ.ಎಚ್. ಮೋಹನ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಹಿರಿಯ ನಿಲಯ ಪಾಲಕಿ ಡಿ.ಒ. ಯಶೋಧಮ್ಮ, ಸಿಬ್ಬಂದಿಗಳಾದ ದೇವರಾಜ್, ಮಂಜುಳಮ್ಮ, ವೈ. ತಿಪ್ಪೇಸ್ವಾಮಿ, ಬಿ.ಎ. ವಿಶ್ವನಾಥ್, ಕರಡಿ ಮಂಜಪ್ಪ, ನಿಂಗರಾಜು, ವಸತಿ ನಿಲಯಗಳ ನಿಲಯಪಾಲಕರು ಹಾಗೂ 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

