
CHITRADURGA NEWS | 22 AUGUST 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಮನೆ-ಮನೆಗೆ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಕಾರ್ಯದಲ್ಲಿ ಶೇ.100ರಷ್ಟು ಸಾಧನೆ ಮಾಡಿ, 20 ಲಕ್ಷಕ್ಕೂ ಅಧಿಕ ಪ್ರಮಾಣಪತ್ರಗಳನ್ನು ನಾಗರಿಕರಿಗೆ ತಲುಪಿಸಿರುವ ಜಿಲ್ಲಾಡಳಿತದ ಕ್ರಮಕ್ಕೆ ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಿಕಲಚೇತನರ ಕ್ಷೇತ್ರದ ಸ್ವಯಂಸೇವಾ ಸಂಸ್ಥೆಗಳ ನೋಂದಣಿ ಕಡ್ಡಾಯ | ಜೆ.ವೈಶಾಲಿ
ಈ ಕುರಿತು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, ‘ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಪ್ರಶಂಸಿದ್ದಾರೆ.
ಇದೇ ರೀತಿಯ ಉತ್ಸಾಹ ಮತ್ತು ಬದ್ಧತೆಯಿಂದ ರಾಜ್ಯದ ಇತರ ಎಲ್ಲ ಯೋಜನೆಗಳು ಹಾಗೂ ಉಪಕ್ರಮಗಳಲ್ಲಿಯೂ ಮುಂದುವರಿದು, ಜನಪರ ಆಡಳಿತಕ್ಕೆ ಮತ್ತಷ್ಟು ಬಲ ತುಂಬುವಂತೆ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅವರ ಸಂಪೂರ್ಣ ತಂಡಕ್ಕೆ ಹಾರೈಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

