
CHITRADURGA NEWS | 17 APRIL 2026
ಚಿತ್ರದುರ್ಗ: ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದಿದ್ದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರದ ಚೆಕ್ ವಿತರಿಸುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತ್ವರಿತ ನ್ಯಾಯ ಒದಗಿಸಿದೆ.
ಇದನ್ನೂ ಓದಿ: ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮದೇವಿ ಜಾತ್ರೆ

ಕಳೆದ ಮಾರ್ಚ್ 19ರಂದು ಚಿತ್ರದುರ್ಗ ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಘಟನೆ ನಡೆದ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.
ಪರಿಹಾರದ ಚೆಕ್ ಅನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ನೊಂದ ವ್ಯಕ್ತಿಗಳಿಗೆ ಏಪ್ರಿಲ್ 16ರಂದು ಗುರುವಾರ ನೀಡಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
