ಮುಖ್ಯ ಸುದ್ದಿ
ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನರಿಗೆ ವಯೋ ವಂದನಾ ಕಾರ್ಡ್ ವಿತರಣೆ
CHITRADURGA NEWS | 15 MARCH 2025
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಬಸವೇಶ್ವರ ವಿದ್ಯಾಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದಲ್ಲಿ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನರಿಗೆ ವಯೋ ವಂದನಾ ಕಾರ್ಡ್ ವಿತರಣೆ ಮಾಡಲಾಯಿತು.
Also Read: ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ | ಮಾ.16 ರಂದು ದೊಡ್ಡ ರಥೋತ್ಸವ
ಲೋಕಾಯುಕ್ತ ಇನ್ಸ್ ಪೆಕ್ಟರ್ ಹೆಚ್.ಗುರುಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ಅಯುಷ್ಮಾನ್ ವಯೋ ವಂದನಾ ಕಾರ್ಡ್ ಹಿರಿಯ ನಾಗರೀಕರಿಗೆ, ವಿಕಲಚೇತರಿಗೆ ಹಾಗೂ ದಿನ ದುರ್ಬಲರಿಗೆ ಸಾಕಷ್ಟು ಉಪಯೋಗವಾಗಲಿದೆ. ಬಸವೇಶ್ವರ ವಿದ್ಯಾಸಂಸ್ಥೆ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಧಮ್ಮ ಕೇಂದ್ರದ ಕಾರ್ಯದರ್ಶಿ ಆರ್.ವಿಶ್ವಸಾಗರ್ , ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ, ನಿವೃತ್ತ ಇಂಜಿನಿಯರ್ ಬೋರಯ್ಯ, ಪ್ರಭಾವತಿ ಶಂಕರಪ್ಪ ಮಾತನಾಡಿದರು.
Also Read: ನಾಯಕನಹಟ್ಟಿ ಜಾತ್ರೆಗೆ ಏನೆಲ್ಲಾ ವ್ಯವಸ್ಥೆ ಆಗಿದೆ ನೋಡಿ..
ಈ ಸಂದರ್ಭದಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ.ಶಂಕರಪ್ಪ, ಕಾಟಮಲ್ಲಯ್ಯ, ವೀರಣ್ಣ ಉಪಸ್ಥಿತರಿದ್ದರು.