
CHITRADURGA NEWS | 06 DECEMBER 2024
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್(Dr.B.R.
ಕ್ಲಿಕ್ ಮಾಡಿ ಓದಿ: ವಿಮಾನದಲ್ಲಿ ಸರ್ಕಾರಿ ಶಾಲೆ ಮಕ್ಕಳ ಪ್ರವಾಸ | ಹಕ್ಕಿಯಂತೆ ಹಾರಾಡಿದ ಹಳ್ಳಿ ಮಕ್ಕಳು

ಚಿತ್ರದುರ್ಗ ನಗರಸಭೆ ಹತ್ತಿರವಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯದ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು, ಡಾ.ಬಿ.ಆರ್.ಅಂಬೇಡ್ಕರ್‌ರವರ ಅನುಯಾಯಿಗಳು ಇದ್ದರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
