ಮುಖ್ಯ ಸುದ್ದಿ
ಬರ ಪರಿಹಾರ ವಿತರಣೆ ಮುಂದಾದ ಜಿಲ್ಲಾಡಳಿತ | ರೈತರಿಗೆ ಸಹಾಯವಾಣಿ ಸ್ಥಾಪನೆ | ಚಿತ್ರದುರ್ಗ ಜಿಲ್ಲೆಯ ಎಷ್ಟು ರೈತರಿಗೆ, ಎಷ್ಟು ಪರಿಹಾರ

CHITRADURGA NEWS | 15 MAY 2024
ಚಿತ್ರದುರ್ಗ: ಭೀಕರ ಬರಕ್ಕೆ ತುತ್ತಾಗಿರುವ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಮಾರ್ಗಸೂಚಿ ಅನುಸಾರ ಬರ ಪರಿಹಾರ ವಿತರಣೆಗೆ ಜಿಲ್ಲಾಡಳಿತ ಮುಂದಾಗಿದೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ 1,31,776 ರೈತರಿಗೆ ಮೊದಲನೇ ಕಂತಾಗಿ ಗರಿಷ್ಠ 2 ಸಾವಿರದವರೆಗೆ 25,61,56,790 ರೂ. ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ.
ಇದನ್ನೂ ಓದಿ: ಡಾ.ಬಿ.ಎಲ್.ವೇಣುಗೆ ಅನಾರೋಗ್ಯ | ಫೋರ್ಟೀಸ್ ಆಸ್ಪತ್ರೆಗೆ ದಾಖಲು, ಚೇತರಿಕೆ
ಈಗ ಪ್ರಸ್ತುತ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಅರ್ಹತೆಯ ಅನುಸಾರ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ (ಇನ್‍ಪುಟ್ ಸಬ್ಸಿಡಿ) ಮೊತ್ತವನ್ನು ಸರ್ಕಾರದಿಂದ ಡಿಬಿಟಿ ಮೂಲಕ ವಿತರಿಸಲಾಗುತ್ತಿದೆ.
ಅದರಂತೆ ಚಿತ್ರದುರ್ಗ ಜಿಲ್ಲೆಯ 1,17,064 ರೈತರಿಗೆ ಒಟ್ಟು ರೂ.89,31,60,013(89 ಕೋಟಿ, 31 ಲಕ್ಷ) ಗಳನ್ನು ಪಾವತಿಸಲಾಗುತ್ತಿದೆ.
ಇದನ್ನೂ ಓದಿ: ಇಂದು ಮದಕರಿ ನಾಯಕರ ಪುಣ್ಯಸ್ಮರಣೆ | ಮದಕರಿ ನಾಯಕರ ಸಾಧನೆ ಸ್ಮರಿಸಿದ ನಾಡಿನ ಗಣ್ಯರು
ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ.
ರೈತರಿಗೆ ಸಹಾಯವಾಣಿ ಸ್ಥಾಪನೆ:
ಪರಿಹಾರ ಹಣ ಪಾವತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 08194-222538, ಉಪ ವಿಭಾಗಾಧಿಕಾರಿಗಳ ಕಚೇರಿ 08194-200342 ಹಾಗೂ ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416, ಚಳ್ಳಕೆರೆ 08195-250648, ಹಿರಿಯೂರು 08193-263226 ಹೊಸದುರ್ಗ 08199-295058, ಹೊಳಲ್ಕೆರೆ 08191-200013, ಮೊಳಕಾಲ್ಮೂರು ತಾಲ್ಲೂಕು ಕಚೇರಿ 08198-229234 ಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ | ಸರ್ವಧರ್ಮಿಯ ವಧು, ವರರು ಭಾಗವಹಿಸಲು ಅವಕಾಶ
