CHITRADURGA NEWS | 21 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ತರಾಸು ರಂಗಮಂದಿರದ ನವೀಕರಣ ಕಾಮಗಾರಿಗಳು ಅಂತಿಮ ಹಂತಕ್ಕೆ ತಲುಪಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಬುಧವಾರ ರಂಗಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: DIPLOMA ಕೃಷಿ ಕೋರ್ಸ್ ಪ್ರವೇಶ | ಅರ್ಜಿ ಅಹ್ವಾನ
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಕಳೆದ ಒಂದು ವರ್ಷದಿಂದ ತರಾಸು ರಂಗಮಂದಿರದ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಸಾರ್ವಜನಿಕರ ಬಳಕೆ ನಿಲ್ಲಿಸಿ, ನವೀಕರಣ ಕಾಮಗಾರಿ ಕೈಗೆತ್ತಿಕೊಂಡು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಾಗೂ ಶಾಸಕರ ಸಮಾಲೋಚನೆಯಂತೆ ಸುಸಜ್ಜಿತ ರಂಗಮಂದಿರ ನಿರ್ಮಾಣದ ಉದ್ದೇಶದಿಂದ ನಿರ್ಮಿತಿ ಕೇಂದ್ರದ ವತಿಯಿಂದ ಈ ಕಾಮಗಾರಿ ನಡೆಸಲಾಗಿದೆ ಎಂದು ತಿಳಿಸಿದರು.
2016ರಲ್ಲೂ ಒಮ್ಮೆ ರಂಗಮಂದಿರದ ನವೀಕರಣ ಮಾಡಲಾಗಿತ್ತು. ಆದರೆ ಈ ಬಾರಿ ಇದನ್ನು ಒಂದು ಸವಾಲಾಗಿ ಸ್ವೀಕರಿಸಿ, ಪಿವಿಆರ್ ಮಾದರಿಯಲ್ಲಿ ಅತ್ಯಾಧುನಿಕ ಸೌಂಡ್ ಮತ್ತು ಲೈಟಿಂಗ್ಸ್ ಹೊಂದಿರುವ ‘ಅಕಾಸ್ಟಿಕ್ ಥಿಯೇಟರ್’ ಆಗಿ ಪರಿವರ್ತಿಸಲಾಗಿದೆ.
ಬೆಂಗಳೂರಿನ ‘ಬ್ರಿಕ್ಸ್ ವಾಲ್’ ಎಂಬ ಹೆಸರಾಂತ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಈ ಸುಸಜ್ಜಿತ ಒಳಾಂಗಣ ವಿನ್ಯಾಸ ಮಾಡಲಾಗಿದ್ದು, ಇನ್ನು ಹೊರಗಡೆ ಕೇವಲ ನಾಮಫಲಕ ಹಾಗೂ ಪ್ಲಾಂಟೇಶನ್ ಕೆಲಸಗಳು ಮಾತ್ರ ಬಾಕಿ ಉಳಿದಿವೆ ಎಂದು ತಿಳಿಸಿದರು.
ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
ಜಿಲ್ಲಾ ಖನಿಜ ಪ್ರತಿಷ್ಠಾನ(ಡಿಎಂಎಫ್) ನಿಧಿಯಿಂದ ರೂ.2.5 ಕೋಟಿ ರೂಪಾಯಿ ವೆಚ್ಚದಲ್ಲಿ ರಂಗಮಂದಿರದ ಒಳಾಂಗಣ ಹಾಗೂ ಹೊರಾಂಗಣದ ಸಿವಿಲ್ ಸ್ಟ್ರಕ್ಚರ್, ಪೇವರ್ಸ್ ಮತ್ತು ಮೇಲ್ಛಾವಣಿ ಸೇರಿದಂತೆ ಸಂಪೂರ್ಣ ದುರಸ್ತಿ ಕಾರ್ಯ ಮಾಡಲಾಗಿದ್ದು, ಆಧುನೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹರ್ಷ ವ್ಯಕ್ತಪಡಿಸಿದರು.
ತರಾಸು ಕಾದಂಬರಿಗಳ ಹೆಸರುಗಳ ಪ್ರದರ್ಶನ:
ಜಿಲ್ಲೆಯ ಹೆಮ್ಮೆಯ ಬರಹಗಾರರಾದ ತರಾಸು ಅವರ ಸ್ಮರಣಾರ್ಥವಾಗಿಯೇ ಈ ರಂಗಮಂದಿರ ನಿರ್ಮಾಣವಾಗಿದ್ದು, ಇಂದಿನ ಪೀಳಿಗೆಗೆ ತರಾಸು ಅವರ ಕೊಡುಗೆ ಹಾಗೂ ಕಾದಂಬರಿಗಳ ಪರಿಚಯ ಇರಲಿ ಎಂಬ ಉದ್ದೇಶದಿಂದ, ಅವರ ಪ್ರಸಿದ್ಧ ಕಾದಂಬರಿಗಳಾದ ‘ದುರ್ಗಾಸ್ತಮಾನ’, ‘ಕಂಬನಿಯ ಕುಯಿಲು’, ‘ರಕ್ತರಾತ್ರಿ’ ಸೇರಿದಂತೆ ಹಲವು ಕೃತಿಗಳ ಹೆಸರುಗಳನ್ನು ಒಳಾಂಗಣದಲ್ಲಿ ಪ್ರದರ್ಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಗಳು ಓವರ್ಲ್ಯಾಪ್ ಆಗದಂತೆ ನಿಗಾವಹಿಸಿ | ಅಧಿಕಾರಿಗಳಿಗೆ ಡಿಸಿ ಸೂಚನೆ
ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರು ನಿಧನದ ಹೊಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ, ಸೂಕ್ತ ಸಮಯ ನಿಗದಿಪಡಿಸಿ ಸಾರ್ವಜನಿಕರ ಬಳಕೆಗೆ ರಂಗಮಂದಿರ ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಎಂ.ಜೆ.ಮಹೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್ ಕುಮಾರ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

