ಮುಖ್ಯ ಸುದ್ದಿ
ಕೋಟೆನಾಡಿಗೆ ಬರುತ್ತಿದ್ದಾರೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ | ಕೇವಲ 48 ಗಂಟೆ ಬಾಕಿ
CHITRADURGA NEWS | 07 FEBRUARY 2024
ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಧಾರವಾಡ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆಗೊಂಡಿರುವ ದಿವ್ಯಪ್ರಭು ಜಿ.ಆರ್.ಜೆ ಅವರಿಗೆ ಚಿತ್ರದುರ್ಗ ನಾಗರೀಕ ವೇದಿಕೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಂಡಿದೆ.
ನಗರದ ತರಾಸು ರಂಗಮಂದಿರದಲ್ಲಿ ಫೆ.9 ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಹಿಸಲಿದ್ದಾರೆ. ಅತಿಥಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ, ಕೆಪಿಸಿಸಿ ಕಾರ್ಯಧ್ಯಕ್ಷ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಆಹಾರ ಮತ್ತು ನಾಗರೀಕರ ಸರಬರಾಜು ಇಲಾಖೆ ಆಯುಕ್ತೆ ವಿ.ವಿ.ಜೋತ್ನ್ಸಾ, ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಹೊಸದುರ್ಗಕ್ಕೆ ‘ಕ್ಲೀನ್‌ಸಿಟಿ’ ಗೌರವ | ನಾಲ್ಕನೆ ಬಾರಿಗೆ ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ ಗರಿ
ಇದೇ ವೇಳೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಟಿ.ವೆಂಕಟೇಶ್ ಅವರನ್ನು ಜಿಲ್ಲೆಗೆ ಸ್ವಾಗತಿಸಲಾಗುತ್ತಿದೆ.
ಕಾರ್ಯಕ್ರಮದ ಸಂಘಟಕರಾಗಿ ಡಾ.ಎಚ್.ವಿ.ಷಣ್ಮುಖಪ್ಪ, ಫಾತ್ಯರಾಜನ್, ಎಸ್‌ಆರ್‌ಎಸ್ ಲಿಂಗಾರೆಡ್ಡಿ, ಆರ್.ನರಸಿಂಹರಾಜು, ಡಾ.ಕೆ.ಸೌಮ್ಯ ಕಾರ್ಯನಿರ್ವಹಿಸುತ್ತಿದ್ದಾರೆ.
ತಮಿಳುನಾಡು ಮೂಲದ ದಿವ್ಯಪ್ರಭು ಜಿ.ಆರ್.ಜೆ ಅವರು 2014ನೇ ಸಾಲಿನ ಐಎಎಸ್ ಬ್ಯಾಚ್‌ನ ಅಧಿಕಾರಿ. ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಲಿಂಗಸಗೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿದ ಇವರು, ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಹಾಗೂ 2022 ಅಕ್ಟೋಬರ್‌ನಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದ ಇವರು 2024 ರ ಜನವರಿ 23 ರವರೆಗೆ ಕರ್ತವ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ವರ್ಗಾವಣೆ
ದಿವ್ಯಪ್ರಭು ಜಿ.ಆರ್.ಜೆ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಾಗಿದ್ದಾಗ ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿ ಮತ್ತು ರಾಷ್ಟ್ರೀಯ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಇವರ ನೇತೃತ್ವದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕು ಉತ್ತಮ ಸಾಧನೆ ಮಾಡಿದ್ದು ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.