CHITRADURGA NEWS | 07 JULY 2026
ಚಿತ್ರದುರ್ಗ: ಅನೇಕ ಹಿರಿಯರ ಮಾರ್ಗದರ್ಶನದಿಂದ ಸಂಯುಕ್ತ ಸಹಕಾರಿ ಅತ್ಯುತ್ತಮ ಮಾರ್ಗದಲ್ಲಿ ಮುನ್ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ಧ ಸಂಯುಕ್ತ ಸಹಕಾರಿ ನಿಗಮದ ಅಧ್ಯಕ್ಷರಾದ ಜಿ.ನಂಜನಗೌಡ ತಿಳಿಸಿದರು.
ಇದನ್ನೂ ಓದಿ: ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ
ನಿಗಮದಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಸೌಹಾರ್ಧ ಸಹಕಾರಿಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು.
ಕಳೆದ ವರ್ಷ ಸೌಹಾರ್ಧ ಚಳುವಳಿ ಹುಟ್ಟಿ 25 ವರ್ಷಗಳಾದ ಪರಿಣಾಮ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಸಂಯುಕ್ತ ಸಹಕಾರಿ ನಿರ್ದೇಶಕರುಗಳಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ಅದರಂತೆ ಚಿತ್ರದುರ್ಗದ ಹಿರಿಯ ಸೌಹಾರ್ಧ ಸಂಯುಕ್ತ ಸಹಕಾರಿಗಳು ಹಾಗೂ ಮರ್ಚೆಂಟ್ ಬ್ಯಾಂಕನ್ನ ನಿಕಟ ಪೂರ್ವ ಅಧ್ಯಕ್ಷರಾದ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿರವರಿಗೆ ಸನ್ಮಾನಿಸುತ್ತಿರುವುದು ಹೆಮ್ಮೆಯೆನಿಸುತ್ತದೆ. ನಿಷ್ಟುರವಾಗಿ ಮಾತನಾಡುತ್ತಿದ್ದ ಅವರು ಮರ್ಚೆಂಟ್ ಬ್ಯಾಂಕನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದ್ದಾರೆ ಎಂದು ಶ್ಲಾಘಿಸಿದರು.
ನಿಗಮದ ನಿರ್ದೇಶಕ ಬಿ.ಹೆಚ್.ಕೃಷ್ಣಾರೆಡ್ಡಿ ಮಾತನಾಡಿ, ಸಾಮಾನ್ಯ ಸಭೆಗಿಂತ ಮುಂಚೆ ಪ್ರತಿ ಜಿಲ್ಲೆಗಳಿಗೆ ಹೋಗಿ ಸಹಕಾರಿಗಳ ಸಭೆ ನಡೆಸಿ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಸಂವಾದ ನಡೆಸುವುದು ನಮ್ಮ ಪದ್ದತಿ. ಅದರಂತೆ ಚಿತ್ರದುರ್ಗದಲ್ಲಿ ಸಂಪರ್ಕ ಸಭೆ ನಡೆಸಿದ್ದೇವೆ. ಎರಡು ಸಾವಿರ ಪ್ರತಿನಿಧಿಗಳು ಭಾಗವಹಿಸುವ ಸಭೆಯಲ್ಲಿ ಎಲ್ಲಾ ಸಮಸ್ಯೆಗಳ ಕುರಿತು ಚರ್ಚಿಸುವುದು ಕಷ್ಟ. ಹಾಗಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಸಂಪರ್ಕ ಸಭೆ ನಡೆಸಿ ಸಂವಾದ ಮಾಡಲಾಗುವುದು ಎಂದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಆಗಸ್ಟ್ ತಿಂಗಳಲ್ಲಿ ಸಾಮಾನ್ಯ ಸಭೆ ನಡೆಸಲಾಗುವುದು. ಆಗ ಸಮಸ್ಯೆ ಕುಂದುಕೊರತೆಗಳಿದ್ದರೆ ತಿಳಿದುಕೊಂಡು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು. ಆರೋಗ್ಯ, ಆಧುನಿಕ ಹಾಗೂ ಸಾವಯವ ಕೃಷಿ ಕುರಿತು ಸಭೆಗಳಲ್ಲಿ ಚರ್ಚಿಸಿದ್ದೇವೆ. ಮೂರು ವರ್ಷಗಳಿಗೊಮ್ಮೆ ಆಡಿಟ್ ಮಾಡಿಸಲಾಗುವುದು. ಆಸ್ತಿಗಳ ಘೋಷಣೆ ಅನಿವಾರ್ಯ. ಬ್ಯಾಲೆನ್ಸ್ ಶೀಟ್ ಸರಿಯಾಗಿರಬೇಕು ಎಂದರು.
ಚಿತ್ರದುರ್ಗ ಕ್ರಿಯಾಶೀಲವಾಗಿದೆ. ಡೆಪಾಸಿಟ್, ಸಾಲದ ಬಡ್ಡಿಯ ಪ್ರಮಾಣವನ್ನು ಕಡಿಮೆಗೊಳಿಸುವ ಕುರಿತು ಚಿಂತನೆಯಿದೆ. ಆರ್ಥಿಕ ಶಿಸ್ತಿಲ್ಲದಿದ್ದರೆ ಯಾವುದೆ ಸಹಕಾರಿಯಾಗಲಿ ನಷ್ಟ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.
ನಿಗಮದ ಪ್ರಾಂತೀಯ ಅಧಿಕಾರಿ ಶ್ರೀಧರ್ ಎಸ್. ಮಾತನಾಡಿ, ರಾಜ್ಯಾದ್ಯಂತ ಪ್ರವಾಸ ಮಾಡಿ ಹತ್ತು ಹದಿನೈದು ವರ್ಷಗಳಿಂದಲೂ ಸಭೆ ನಡೆಸುತ್ತಿದ್ದೇವೆ. ಇದರಿಂದ ಕುಂದು ಕೊರತೆ, ಸಮಸ್ಯೆಗಳನ್ನು ಆಲಿಸಲು ಸಹಕಾರಿಯಾಗಲಿದೆ. ಸಹಕಾರಿಗಳ ಜೊತೆ ಉತ್ತಮ ಒಡನಾಟವಿಟ್ಟುಕೊಳ್ಳುವುದು ಸಭೆಯ ಉದ್ದೇಶ. ಸಹಕಾರಿ ಕ್ಷೇತ್ರವನ್ನು ಯಾವ ರೀತಿ ಮುನ್ನಡೆಸಿಕೊಂಡು ಹೋಗಬೇಕೆನ್ನುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಅಹ್ವಾನ
ಮಚೆಂಟ್ ಬ್ಯಾಂಕ್ ಅಧ್ಯಕ್ಷ ರಘುರಾಮರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಹಿರಿಯ ಸಹಕಾರಿ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ನಿಗಮದ ಉಪಾಧ್ಯಕ್ಷ ಎ.ಆರ್.ಪ್ರಸನ್ನಕುಮಾರ್, ನಿರ್ದೇಶಕ ವಿಜಯ್ ಸಿ.ಪಿ. ಜಿಲ್ಲಾ ಸೌಹಾರ್ಧ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಡಿ.ಆರ್.ತಿಪ್ಪೇಸ್ವಾಮಿ ವೇದಿಕೆಯಲ್ಲಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

