CHITRADURGA NEWS | 12 AUGUST 2024
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯ ಸಿ.ಟಿ.ಸ್ಕ್ಯಾನ್ ವಿಭಾಗದಲ್ಲಿ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಮಂಜುನಾಥ್(38) ಮೃತಪಟ್ಟಿದ್ದಾರೆ.

ಮೆಡಿಕಲ್ ಇಮ್ಯಾಜಿನ್ ಟೆಕ್ನಾಲಜಿ ಅಧ್ಯಯನ ಮಾಡಿ, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಸಿ.ಟಿ.ಸ್ಕ್ಯಾನ್ ವಿಭಾಗದಲ್ಲಿ ತಂತ್ರಜ್ಞಾರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟ
ಭಾನುವಾರ ರಾತ್ರಿ 8 ಗಂಟೆ ವೇಳೆಗೆ ಐಯುಡಿಪಿ ಬಡಾವಣೆಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ (self death) ಮಾಡಿಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಿಲ್ಲ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಜುನಾಥ್ ಸಾವಿಗೆ ಜಿಲ್ಲಾ ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿ ಹಾಗೂ ಸ್ನೇಹಿತರು ಮುಮ್ಮಲ ಮರುಗಿದ್ದಾರೆ.
ಸ್ನೇಹಜೀವಿಯಾಗಿದ್ದ ಮಂಜು ಸದಾ ಸ್ನೇಹಿತರು, ಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದ. ಪ್ರಾಮಾಣಿಕ ಕೆಲಸಗಾರನಾಗಿದ್ದ ಎಂದು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಕಣ್ಣೀರಾಗಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
