ಮುಖ್ಯ ಸುದ್ದಿ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ಬದಲ್ಲಿ ಸರಣಿ ಸಭೆಗಳು | ಸರ್ಕಾರಿ ಮೆಡಿಕಲ್ ಕಾಲೇಜು ಪ್ರಗತಿ ಪರಿಶೀಲನಾ ಸಭೆ
Published on
ಚಿತ್ರದುರ್ಗ ನ್ಯೂಸ್. ಕಾಂ: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅ. 03 ಮಂಗಳವಾರ ಬೆಳಿಗ್ಗೆ 11 ಗಂಟೆಗಯಿಂದ ನಿರಂತರವಾಗಿ ಮೂರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ದಿವ್ಯಪ್ರಭು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‍ನ ಸಭೆ ಕೈಗೊಳ್ಳುವರು.
ಮಧ್ಯಾಹ್ನ 01 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣಕ್ಕೆ ಆಗಮಿಸಿ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಸಚಿವರು ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
Continue Reading
You may also like...
Related Topics:Chitradurga, D. Sudhakar, district incharge minister, kannada katest news, Medical College, Minister, ಕನ್ನಡ, ಕನ್ನಡ ಲೇಟೆಸ್ಟ್ ನ್ಯೂಸ್, ಕರ್ನಾಟಕ, ಚಿತ್ರದುರ್ಗ, ಜಿಲ್ಲಾ ಉಸ್ತುವಾರಿ ಸಚಿವ, ಡಿ.ಸುಧಾಕರ್, ಮೆಡಿಕಲ್ ಕಾಲೇಜ್, ಸರ್ಕಾರ
Click to comment