
CHITRADURGA NEWS | 18 JUNE 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎಲ್.ಎ.ಡಿ.ಸಿ.ಎಸ್ ಕಚೇರಿಯಲ್ಲಿ ಪೂರ್ಣಾವಧಿ ಲೀಗಲ್‍ಯೇಡ್ ಕೌನ್ಸಿಲ್ ಎಂಗೇಜ್‍ಮೆಂಟ್ ಸಿಸ್ಟಮ್‍ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Also Read: ನಾಳೆ ಹಿರಿಯೂರಿನಲ್ಲಿ ವಿದ್ಯುತ್ ವ್ಯತ್ಯಯ

ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ, ಡೆಪ್ಯುಟಿ ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ ಹಾಗೂ ಅಸಿಸ್ಟೆಂಟ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಅವರಿಗೆ ಇದೇ ಜೂನ್ 27ರಂದು ಸಂಜೆ ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ.
ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
