
CHITRADURGA NEWS | 10 JULY 2026
ಚಿತ್ರದುರ್ಗ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು 8 ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆ ಮಾಡಲು ಮಾನದಂಡಗಳು:
5 ರಿಂದ 18 (ಜುಲೈ 31ರಂತೆ) ವರ್ಷದೊಳಗಿರಬೇಕು. ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಮತ್ತು ಕಲೆ, ಸಾಂಸ್ಕøತಿಕ, ಸಂಗೀತ ಈ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ಹೊಂದಿರಬೇಕು. ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿದ ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು. ಪ್ರತಿಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು ಅಥವಾ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.
ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಮಾಹಿತಿ, ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ನೆಲಸಿರಬೇಕು.
ಇದನ್ನೂ ಓದಿ: ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುವಂತೆ ಲಿಂಗಾರೆಡ್ಡಿ ಆಗ್ರಹ
ಆಸಕ್ತರು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪ್ರಶಸ್ತಿಗಾಗಿ ಮಕ್ಕಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

