
CHITRADURGA NEWS | 27 AUGUST 2025
ಚಿತ್ರದುರ್ಗ: 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 29 ಹಾಗೂ 30 ರಂದು ನಡೆಯಲಿದೆ. ಆದರೆ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಎಸ್.ಪಿ. ಆಫೀಸ್ ಹತ್ತಿರದ ಅಫಿಶಿಯಲ್ ಕ್ಲಬ್‍ನಲ್ಲಿ ಜರುಗಲಿದೆ.
ಇದನ್ನೂ ಓದಿ: ವಸತಿ ಶಾಲೆ ವಿದ್ಯಾರ್ಥಿಗಳನ್ನು ತಮ್ಮ ಮನೆಯ ಮಕ್ಕಳಂತೆ ನೋಡಿಕೊಳ್ಳಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಭಾಗವಹಿಸುವ ಕ್ರೀಡಾಪಟುಗಳು ಕ್ಯೂ.ಆರ್.ಕೋಡ್ ಬಳಸಿ ಆನ್‍ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು.
ಆನ್‍ಲೈನ್ ನೊಂದಣಿ ಮಾಡದಿದ್ದರೆ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ. ಕ್ರೀಡಾಪಟುಗಳ ಪ್ರಯಾಣಭತ್ಯೆ ಮತ್ತು ದಿನಭತ್ಯೆಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಆದ್ದರಿಂದ ಕ್ರೀಡಾಪಟುಗಳು ಬ್ಯಾಂಕ್ ಪಾಸ್ ಪುಸ್ತಕದ ನಕಲು, ಪಾಸ್‍ಪೋರ್ಟ್ ಸೈಜ್ ಫೋಟೋ ಹಾಗೂ ಆಧಾರ್ ಕಾರ್ಡ್ ಪ್ರತಿ ತಪ್ಪದೇ ಸಲ್ಲಿಸಲು ಸೂಚಿಸಿದೆ.
ಇದನ್ನೂ ಓದಿ: DCC ಬ್ಯಾಂಕ್ ಗೆ 8.3 ಕೋಟಿ ನಿವ್ವಳ ಲಾಭ | ಸಚಿವ ಡಿ.ಸುಧಾಕರ್ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಗಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
