
CHITRADURGA NEWS | 12 AUGUST 2025
ಚಿತ್ರದುರ್ಗ: ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಸಹಕಾರ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧಾ ಕಾರ್ಯಕ್ರಮ ಇದೇ ಆಗಸ್ಟ್ 16ರಂದು ನಗರದ ಪಿಳ್ಳೇಕೆರೆನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆಗಳ ಕೆಎಂಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಹಕಾರ ಕುರಿತು ಪ್ರಬಂಧ ಸ್ಪರ್ಧೆ ವಿಷಯ:-“ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳುವಳಿಯ ಪಾತ್ರ” “ಸಹಕಾರ” ವಿಷಯ ಅಳವಡಿಕೆ “Role of the cooperative movement in integrated rural development”.
ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ವಿಷಯ “ಶಾಲಾ ಕಾಲೇಜು ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಹಾಗೂ ಸಹಕಾರಿ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಮಾತ್ರವೇ ಸಹಕಾರಿ ವ್ಯವಸ್ಥೆ ಸದೃಢಗೊಳ್ಳಬಲ್ಲದು” “ The co-operative system can only be strengthened by including cooperative subjects in school and college curriculam and establishing cooperatives universities” ಎಂಬ ವಿಷಯ ಕುರಿತು ಪರ ಮತ್ತು ವಿರೋಧ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ.
ಜಿಲ್ಲೆಯ ಪ್ರೌಢಶಾಲೆ ಹಾಗೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಕಳುಹಿಸಿಕೊಡಲು ವಿನಂತಿಸಲಾಗಿದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಮುಂದುವರೆದ ಒಳಹರಿವು | ಇಂದಿನ ಜಲಾಶಯದ ಮಟ್ಟ
ಹೆಚ್ಚಿನ ಮಾಹಿತಿಗಾಗಿ ಮುಖ್ಯಕಾರ್ಯನಿರ್ವಹಣಾಧಿಕಾರಿ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಭವನ, ಬಿ.ಎಲ್.ಗೌಡ ಲೇ ಔಟ್, ಕೆಳಗೋಟೆ, ಚಿತ್ರದುರ್ಗ-577501 ಮೊಬೈಲ್ ಸಂಖ್ಯೆ 7899688528, 9663100410, 9980803050, ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
